Advertisement

ಅಂಗವಿಕಲರ ಪ್ರತಿಭೆ ಪ್ರೋತ್ಸಾಹಿಸಿ: ಡಿಸಿ

11:46 AM Dec 04, 2019 | Naveen |

ಬೀದರ: ವಿಲಚೇತನರ ಅಂಗವೈಕಲ್ಯವನ್ನು ಕಡೆಗಣಿಸಿ, ಅವರಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ|ಎಚ್‌.ಆರ್‌. ಮಹಾದೇವ ಹೇಳಿದರು.

Advertisement

ನಗರದ ಜಿಲ್ಲಾ ರಂಗ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆಯಲು ಮುಂದಾಗಬೇಕು. ವಿಕಲಚೇತನರು ಸಲ್ಲಿಸುವ ಅಹವಾಲುಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌ ಮಾತನಾಡಿ, ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವಾಗುವುದು ಸೇರಿದಂತೆ ವಿವಿಧ ರೀತಿಯಿಂದ ಸಹಾಯ ಹಸ್ತ ನೀಡಲು ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ಕೆ. ಜಗದೀಶ ಮಾತನಾಡಿ, ಜಿಲ್ಲೆಯಲ್ಲಿರುವ ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಲು ಇಲಾಖೆ ಕಾರ್ಯಪ್ರವೃತ್ತವಾಗಿದೆ. ವಿದ್ಯಾರ್ಥಿವೇತನ, ವಿವಾಹ ಪ್ರೋತ್ಸಾಹ ಧನ, ಲ್ಯಾಪ್‌ಟಾಪ್‌ ವಿತರಣೆ, ವಿಕಲಚೇತನರು ಕಾಲೇಜು ಅಥವಾ ಉದ್ಯೋಗ ಸ್ಥಳಕ್ಕೆ ಸುಲಭವಾಗಿ ಹೋಗಿ ಬರಲು ಅನುಕೂಲವಾಗಲು ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಇವುಗಳ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ್‌, ಭಂವರ್‌ ಸಿಂಗ್‌ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಮುಖಂಡರಾದ ಅನೀಲ ಬೆಲ್ದಾರ್‌, ರಾಜು ಕಡ್ಯಾಳ, ಸಂತೋಷ ಭಾಲ್ಕಿ, ದಾಸ ಸೂರ್ಯವಂಶಿ, ಇತರರು ಉಪಸ್ಥಿತರಿದ್ದರು.

Advertisement

ಬಳಿಕ ವಿಕಲಚೇತನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮುಡಬಿಯ ವಿಶೇಷ ಮಕ್ಕಳ ಶಾಲೆ ಹಾಗೂ ನವಜೀವನ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಹಾಗೂ ಎಂಆರ್‌ಡಬ್ಲೂ, ವಿಆರ್‌ಡಬ್ಲೂ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತು.

Advertisement

Udayavani is now on Telegram. Click here to join our channel and stay updated with the latest news.

Next