Advertisement

ಮಂತ್ರಾಲಯ ರಸ್ತೆಯಲ್ಲಿ ಭೀಕರ ಅಪಘಾತ: ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

09:54 AM Nov 11, 2020 | keerthan |

ರಾಯಚೂರು: ನಗರ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಸ್ವಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.

Advertisement

ತಾಲೂಕಿನ ಮಂಜರ್ಲಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ಅಭಿಷೇಕ, ಬಸವರಾಜ, ಗಣೇಶ ಎಂದು ಗುರುತಿಸಿದ್ದು, ಸಿದಾರ್ಥ, ಭೀಮರೆಡ್ಡಿ ಗಂಭೀರ ಗಾಯಗೊಂಡಿದ್ದಾರೆ.

ಮೃತರು ಹಾಗೂ ಗಾಯಗೊಂಡವರು ಒಂದೇ ಕಾರಿನಲ್ಲಿದ್ದರು. ಇವರೆಲ್ಲ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಹಾರ ಚುನಾವಣೋತ್ತರ ಸಮೀಕ್ಷೆ ತಲೆಕೆಳಗಾಗಲು ಕಾರಣವೇನು ? ಇಲ್ಲಿದೆ ತಜ್ಞರ ಅಭಿಪ್ರಾಯ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next