Advertisement
ಬುಧವಾರ ನಡೆದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್ ಅಧ್ಯಕ್ಷರಾಗಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಆಗಿತ್ತು.
Related Articles
ಹಾಲಿನ ದರ ಹೆಚ್ಚಳ ವಿಚಾರವಾಗಿ ಮುಖ್ಯಮಂತ್ರಿನ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಎಂಎಫ್ನ ನೂತನ ಅಧ್ಯಕ್ಷ ಭೀಮಾನಾಯ್ಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕ ಹಾಲು ಒಕ್ಕೂಟದಿಂದ ಬೆಲೆ ಏರಿಕೆ ಮಾಡುವಂತೆ ಮನವಿ ಬಂದಿದೆ. ರೈತರಿಗೆ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರೋತ್ಸಾಹಧನ ಮೊತ್ತವನ್ನು ಇನ್ನೂ 2 ರೂ. ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಆದ್ದರಿಂದ ಗ್ರಾಹಕರಿಗೆ ಮಾರಾಟ ಮಾಡುವ ನಂದಿನಿ ಹಾಲಿನ ಪ್ರತಿ ಲೀಟರ್ ಗೆ 5 ರೂ ಹೆಚ್ಚಳ ಮಾಡುವಂತೆ ಈಗಾಗಲೇ ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡಿದೆ ಎಂದರು. ಕೆಎಂಎಫ್ ಅಧ್ಯಕ್ಷರಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಹಾಗೂ ನನಗೆ ಬೆಂಬಲ ನೀಡಿರುವ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಸರ್ಕಾರದ ಮಾರ್ಗದರ್ಶನದ ಜತೆಗೆ ರೈತರ ಮತ್ತು ಗ್ರಾಹಕರ ಸಹಕಾರ ಕೋರುತ್ತೇನೆ. ನಂದಿನಿ ಹಾಲು ರಾಷ್ಟ್ರಮಟ್ಟದ ಬ್ರಾಂಡ್ ಆಗಿದೆ. ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನ ಕೆಎಂಎಫ್ ಮಾಡಲಿದೆ ಎಂದು ತಿಳಿಸಿದರು.
Advertisement
ಖರೀದಿ ದರ ಹೆಚ್ಚಳ ಬಗ್ಗೆ ಚರ್ಚೆ ಸಹಕಾರ ಸಚಿವ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ ರೈತ ರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚ ಳದ ಬಗ್ಗೆ ಚರ್ಚೆ ನಡೆಸಲಾಗುವುದು. ಜತೆಗೆ ಗ್ರಾಹಕರಿಗೂ ನೀಡುವ ಹಾಲಿನ ದರದಲ್ಲೂ ಹೆಚ್ಚಳ ಮಾಡಬೇಕಾಗಿದೆ ಎಂದು ಹೇಳಿದರು. ಕೆಎಂಎಫ್‌ನ ನಂದಿನಿ ಹಾಲನ್ನು ಅಮೂಲ್ ಜೊತೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ. ನಾವು ನಮ್ಮ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಹೋದರೆ ನಮಗೆ ಒಳ್ಳೆಯ ಮಾರುಕಟ್ಟೆ ಇರುತ್ತದೆ. ಆ ನಿಟ್ಟಿನಲ್ಲಿಯೆ ಕೆಎಂಎಫ್ ಹೆಜ್ಜೆಯಿರಿಸಲಿದೆ ಎಂದರು.