Advertisement

ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಏರುವ ಭೀತಿ! ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

05:20 PM Oct 15, 2020 | sudhir |

ಯಾದಗಿರಿ : ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 3 ಲಕ್ಷ ಕ್ಯೂಸೆಕ್ ನಷ್ಟು ನೀರು ಹರಿಯುವ ಸಾಧ್ಯತೆಯಿದ್ದು ಜನ ಜಾನುವಾರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಎಚ್ಚರಿಕೆ ನೀಡಿದ್ದಾರೆ.

Advertisement

ಈಗಾಗಲೇ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತ ಕ್ರಮವಹಿಸಲು ಸಹಾಯಕ ಆಯುಕ್ತರು ಯಾದಗಿರಿ ಹಾಗೂ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ , ತಾಲೂಕ ಪಂಚಾಯತ್ ಕಾರ್ಯಾನಿರ್ವಾಣಾಧಿಕಾರಿಗಳಿಗೆ , ನೋಡಲ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ .

ಸಂಭವನೀಯ ಪ್ರವಾಹ ಪೀಡಿತ ಗ್ರಾಮಗಳ ನೋಡಲ್ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ .

ಅಗತ್ಯ ಬಿದ್ದಲ್ಲಿ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ:ಕಲಬುರಗಿ: ಭಾರಿ ಮಳೆಗೆ ಕೆಬಿಎನ್ ದರ್ಗಾದಲ್ಲಿ 600 ವರ್ಷಗಳ ಪುರಾತನ ಬೃಹತ್ ಗೋಡೆ ಕುಸಿತ

Advertisement

ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು ಜನರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ , ಯಾವದೇ ತುರ್ತು ಸಂದರ್ಭದಲ್ಲಿ ನದಿ ಪಾತ್ರ ಮತ್ತು ಹಳ್ಳಗಳ ಕಡೆಗೆ ಜನ ಮತ್ತು ಜಾನುವಾರುಗಳು ಹೊಗದಂತೆ ಎಚ್ಚರವಹಿಸಲು ತಿಳಿಸಿದ್ದಾರೆ.

ಈಗಾಗಲೇ ಮುಂಜಾಗ್ರತ ಕ್ರಮವಾಗಿ ಗ್ರಾಮ ಪಂಚಾಯತ ಮೂಲಕ ಡಂಗೂರ ಸಾರಿಸಲಾಗಿದೆ , ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253771 ಸಂಖ್ಯೆಗೆ ಕರೆ ಮಾಡಲು ಸಾರ್ವಜನಿಕರಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next