Advertisement

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

12:55 AM Jul 01, 2024 | Team Udayavani |

ಭೋಪಾಲ್‌: ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್‌ ಮೌಲಾ ಮಸೀದಿ ಸಂಕೀರ್ಣದಲ್ಲಿ ನಡೆದ 98 ದಿನಗಳ ಸಮೀಕ್ಷೆಯಲ್ಲಿ 39 ಮುರಿದಿರುವ ವಿಗ್ರಹಗಳು ಸೇರಿದಂತೆ ಒಟ್ಟು 1,710 ಅವಶೇಷಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರದೇಶ ಹೈಕೋರ್ಟ್‌ ಆದೇಶದನ್ವಯ ಭಾರತೀಯ ಪುರಾತತ್ವ ಇಲಾಖೆಯು ಈ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿದೆ. ಕಳೆದ ಗುರುವಾರವೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಸರಸ್ವತಿ, ಮಹಿಷಾಸುರ ಮರ್ದಿನಿ, ಗಣೇಶ, ಕೃಷ್ಣ, ಮಹಾದೇವ, ಬ್ರಹ್ಮ ಮತ್ತು ಹನುಮಂತನ ವಿಗ್ರಹಗಳು ಹಾನಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಹೇಳಲಾಗಿದೆ. ಜು.4ರಂದು ಎಎಸ್‌ಐ ತನ್ನ ಸಮೀಕ್ಷಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಮುಸ್ಲಿಮರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next