Advertisement
ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ತುಲನೆ ಮಾಡಿದರೆ ಕಾಂಗ್ರೆಸ್ ಬಲಿಷ್ಠವಾಗಿರುವುದರಿಂದ ಕಾಂಗ್ರೆಸ್‌ನಿಂದ ಆಕ್ಷೇಪ ಕೇಳಿಬಂದಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಪ್ರತ್ಯೇಕವಾಗಿ ಬುಧವಾರ ಸಭೆ ಕರೆದು ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಿಲ್ಲೆಯಲ್ಲಿ ಒಂದೇ ಒಂದು ಪ್ರಮುಖ ಜನಪ್ರತಿನಿಧಿಗಳಿಲ್ಲದ ಜೆಡಿಎಸ್‌ಗೆ ಬಿಟ್ಟುಕೊಡುವುದರಲ್ಲಿ ಏನು ಅರ್ಥವಿದೆ ಎಂದು ಉಡುಪಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಚಿಕ್ಕಮಗಳೂರಿನಲ್ಲಿಯೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಹೀಗೆ ಹೊಂದಾಣಿಕೆಯಾದಲ್ಲಿ ಕೆ. ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಲಿದ್ದಾರೆಂಬ ಬಹುದಿನಗಳ ಊಹಾಪೋಹವನ್ನು ಹೆಗ್ಡೆಯವರು ಮತ್ತೂಮ್ಮೆ ಅಲ್ಲಗಳೆದಿದ್ದಾರೆ. ಹಾಗಿದ್ದರೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದೆ.