Advertisement

ಅಯೋಧ್ಯೆ ಕನಸು ಸಾಕಾರ: ಸಾಧು ಸಂತರ ಸಮ್ಮುಖದಲ್ಲಿ ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ

01:04 PM Aug 05, 2020 | Nagendra Trasi |

ಲಕ್ನೋ: ಕೊನೆಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ದೇಶದ ಲಕ್ಷಾಂತರ ರಾಮಭಕ್ತರ ಕನಸು ನನಸಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಆಗಸ್ಟ್ 5-2020) 12.44ಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ನೆರವೇರಿಸಿದ್ದಾರೆ.

Advertisement

ಪ್ರಧಾನಿ ಮೋದಿ ಅವರು ಮೊದಲು 40 ಕಿಲೋ ತೂಕದ ಬೆಳ್ಳಿ ಇಟ್ಟಿಗೆ ಪ್ರತಿಷ್ಠಾಪಿಸಿದ್ದರು. ವಿಶ್ವ ಹಿಂದೂ ಪರಿಷತ್ ನ ಮುಖಂಡ ದಿ.ಅಶೋಕ್ ಸಿಂಘಾಲ್ ಅವರ ಸೋದರಳಿಯ ಸಲಿಲ್ ಸಿಂಘಾಲ್ ಯಜಮಾನನಾಗಿ ಭೂಮಿ ಪೂಜೆ ಮುನ್ನಡೆಸಿದ್ದರು. ಈ ಸಂದರ್ಭದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಜೀ, ನ್ಯಾಸ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್ ಜತೆಗಿದ್ದರು.

ಪ್ರಧಾನಿ ಮೋದಿ ಅವರು 12.44:08ರಿಂದ 12.44:40ರ 32 ಸೆಕೆಂಡುಗಳ ಅವಧಿಯ ಶುಭ ಮುಹೂರ್ತದಲ್ಲಿ ಭೂಮಿ ಪೂಜೆ, ಶಿಲಾನ್ಯಾಸ ನೆರವೇರಿಸಿದ್ದರು. ಇದರೊಂದಿಗೆ ಅಯೋಧ್ಯೆ ಸೇರಿದಂತೆ ಇಡೀ ದೇಶವೇ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಂಡಿದೆ ಎಂದು ವರದಿ ತಿಳಿಸಿದೆ.

ರಾಮಜನ್ಮಭೂಮಿಯಲ್ಲಿ ಭೂಮಿ ಪೂಜೆ ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next