Advertisement

ಬೆಂಗಳೂರಿನ ಸಂಕಷ್ಟಗಳಿಗೆ ‘ಭ್ರಷ್ಟರಾಮಯ್ಯ’ಕಾರಣ : ಬಿಜೆಪಿ ತಿರುಗೇಟು

04:27 PM Sep 12, 2022 | Team Udayavani |

ಬೆಂಗಳೂರು: ನಗರದಲ್ಲಿ ಮಳೆ ಅವಾಂತರಗಳ ಕುರಿತು ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಸಮರ ಮುಂದುವರಿದಿದ್ದು, ಬಿಜೆಪಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭ್ರಷ್ಟರಾಮಯ್ಯ ಎಂದು ಕರೆದಿದೆ.

Advertisement

”ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಅಕಾಲಿಕ ಮಳೆಯ ಸಂದರ್ಭದಲ್ಲಿ, ಮೊಳಕಾಲುದ್ದ ನೀರಿನಲ್ಲೂ ಬೋಟ್‌ ರೈಡ್‌ ಮೂಲಕ ನೆರೆ ಪ್ರದೇಶಕ್ಕೆ ತೆರಳಿ ಜನ ಸ್ಪಂದನೆಯ ನಾಟಕ ಮಾಡಿದ್ದನ್ನು ರಾಜ್ಯದ ಜನತೆ ಗಮನಿಸಿದ್ದಾರೆ.ಅಷ್ಟಕ್ಕೂ ಬೆಂಗಳೂರಿನ ಮೊನ್ನೆಯ ಸಂಕಷ್ಟದ ದಿನಗಳಿಗೆ ಸಿದ್ದರಾಮಯ್ಯ (#ಭ್ರಷ್ಟರಾಮಯ್ಯ) ಅವರೇ ನೇರ ಕಾರಣ” ಎಂದು ಟ್ವೀಟ್ ಮಾಡಿದೆ.

”ಕೆರೆಗಳನ್ನು ಡಿ-ನೋಟಿಫಿಕೇಶನ್ ಮಾಡಲು ಅವಕಾಶ ಇಲ್ಲವೆಂದು ಅಧಿಕಾರಿಗಳು ತಿಳಿಸಿದರೂ #ಭ್ರಷ್ಟರಾಮಯ್ಯ ಸರ್ಕಾರ ಕಾಯ್ದೆಯನ್ನೇ ತಿದ್ದುಪಡಿ ಮಾಡಿತು.ಈ ಜನವಿರೋಧಿ ನಿರ್ಧಾರದ ಮೂಲಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಪಡೆದ ಕಪ್ಪಕಾಣಿಕೆ ಎಷ್ಟು? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.

”ಮಾನ್ಯ #ಭ್ರಷ್ಟರಾಮಯ್ಯ ಅವರೇ, ಕೆರೆಗಳನ್ನು ಡಿನೋಟಿಫೈ ಮಾಡಲು ತಡೆಯಿದ್ದ ಕಾಯ್ದೆಯನ್ನೇ ಅಂದು ಬದಲಾವಣೆ ಮಾಡಿ ಅನುಮೋದನೆ ನೀಡಿದ್ದು ಏಕೆ? ಅಕ್ರಮ ಒತ್ತುವರಿಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ. ಅಂದು ಸಮಸ್ಯೆ ಸೃಷ್ಟಿಸಿ ಇಂದು ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ?” ಎಂದು ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next