Advertisement

Breaking news :  ಭೂಪೇಂದ್ರ ಪಟೇಲ್ ಗುಜರಾತ್ ನೂತನ ಸಿಎಂ

05:42 PM Sep 12, 2021 | Team Udayavani |

ಗಾಂಧಿನಗರ : ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ

Advertisement

ಶನಿವಾರ ನಡೆದ ದಿಢೀರ್ ಬೆಳವಣೆಗೆಯಲ್ಲಿ ವಿಜಯ್ ರೂಪಾಣಿಯವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ನಂತರ ಮುಖ್ಯಮಂತ್ರಿ ಹುದ್ದೆ ಯಾರಿಗೆ ಒಲಿಯಲಿದೆ ಎನ್ನುವುದು ಬಿಸಿ ಬಿಸಿ ಚರ್ಚೆಯಾಗಿತ್ತು.ಇದೀಗ ಕುತೂಹಲಕ್ಕೆ ತೆರೆ ಬಿದ್ದಿದ್ದು ಭೂಪೇಂದ್ರ ಪಟೇಲ್ ಅವರು ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ರೂಪಾಣಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್‍.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿದ್ದವು.

ಇಂದು ರಾಜ್ಯಕ್ಕೆ ಆಗಮಿಸಿದ ಬಿಜೆಪಿ ವರಿಷ್ಠರು ಸಭೆ ನಡೆಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ನೂತನ  ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಹೆಸರನ್ನು ಘೋಷಿಸಿದರು.

Advertisement

ಇನ್ನು 2022ರ ಡಿಸೆಂಬರ್ ತಿಂಗಳಿನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತ್ತೊಂದು ಬಾರಿ ಗದ್ದುಗೆ ಏರಲು ಬಿಜೆಪಿ ಯೋಜನೆ ಹಾಕಿಕೊಂಡಿದೆ. ಇದರ ಮೊದಲ ಹೆಜ್ಜೆ ಎನ್ನುವಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ರಾಜೀನಾಮೆ ಪಡೆದು ಹೊಸಬರಿಗೆ ಅವಕಾಶ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next