ನವದೆಹಲಿ: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಸೋಮವಾರ (ಸೆಪ್ಟೆಂಬರ್ 13) ಗುಜರಾತ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ವಾಜಪೇಯಿಯವರೂ ಎತ್ತಿನ ಗಾಡಿಯಲ್ಲಿ ಬಂದಿದ್ದರು, ನಾವು ಬಂದರೆ ತಪ್ಪೇಕೆ?: ಸಿದ್ದರಾಮಯ್ಯ
ಭೂಪೇಂದ್ರ ಪಟೇಲ್ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಪಟೇಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
2022ರ ಡಿಸೆಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತವರಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ 15 ತಿಂಗಳು ಬಾಕಿ ಇರುವಾಗಲೇ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರು.
ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಹಾಜರಾಗಿದ್ದರು.