Advertisement

ಮುಂದಿನ ಅವಧಿಗೂ ಭೂಪೇಂದ್ರ ಪಟೇಲ್‌ ಸಿಎಂ: ಗುಜರಾತ್‌ ಬಿಜೆಪಿ ಅಧ್ಯಕ್ಷರ ಹೇಳಿಕೆ

08:39 PM Oct 02, 2022 | Team Udayavani |

ಅಹಮದಾಬಾದ್‌: ಗುಜರಾತ್‌ನಲ್ಲಿ ಮುಂದಿನ ಅವಧಿಗೂ ಹಾಲಿ ಸಿಎಂ ಭೂಪೇಂದ್ರ ಪಟೇಲ್‌ ಅವರನ್ನೇ ಮುಂದುವರಿಸಲಾಗುವುದು ಎಂದು ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌.ಪಾಟೀಲ್‌ ಘೋಷಿಸಿದ್ದಾರೆ.

Advertisement

ವರ್ಷಾಂತ್ಯದಲ್ಲಿ ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಈ ಹೇಳಿಕೆ ಬಂದಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಮ್‌ ಆದ್ಮಿ ಪಕ್ಷ ಪ್ರಬಲ ಪೈಪೋಟಿ ನೀಡುವುದಿಲ್ಲ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇರಲಿದೆ,’ ಎಂದರು.

“ಭೂಪೇಂದ್ರ ಪಟೇಲ್‌ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ಗುಜರಾತ್‌ ಮತ್ತಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿ ಅವರನ್ನೇ ಮುಂದಿನ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರಿಸಲಾಗುವುದು,’ ಎಂದು ಸಿ.ಆರ್‌.ಪಾಟೀಲ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next