Advertisement

ಭೂತಾನ್‌ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

12:50 AM May 04, 2019 | Team Udayavani |

ಬೆಂಗಳೂರು: ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಭೂತಾನ್‌ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕರ್ಮಾದೇಮಾ (21) ಮೃತ ವಿದ್ಯಾರ್ಥಿನಿ. ಹೆಸರಘಟ್ಟ ಮುಖ್ಯರಸ್ತೆಯ ಖಾಸಗಿ ಕಾಲೇಜಿನಲ್ಲಿ ಇಂಟೀರಿಯರ್‌ ಡಿಸೈನಿಂಗ್‌ ವ್ಯಾಸಂಗ ಮಾಡುತ್ತಿದ್ದ ಕರ್ಮಾದೇಮಾ, ಗುರುವಾರ ಎಂದಿನಂತೆ ಕಾಲೇಜಿಗೆ ಹೋಗಿದ್ದರು. ಮಧ್ಯಾಹ್ನ 12.15ರ ಸುಮಾರಿಗೆ ಹಾಸ್ಟೆಲ್‌ನ ಕೊಠಡಿಗೆ ಬಂದು ಒಳಗಿನಿಂದ ಡೋರ್‌ಲಾಕ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ಸಮಯದ ಬಳಿಕ ಸ್ನೇಹಿತೆಯರು ಹಲವು ಬಾರಿ ಬಾಗಿಲು ಬಡಿದರೂ ಬಾಗಿಲು ತೆರೆಯದಿದ್ದಕ್ಕೆ ಅನುಮಾನಗೊಂಡು ಹಾಸ್ಟೆಲ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಗಿಲು ಓಡೆದು ಒಳಪ್ರವೇಶಿಸಿದಾಗ ಕರ್ಮಾದೇಮಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ಮಾದೇಮಾಗೆ ಪತ್ರಿಕೋದ್ಯಮ ಕಲಿಯುವ ಬಯಕೆ ಇತ್ತು. ಪೋಷಕರ ಒತ್ತಾಯಕ್ಕೆ ಇಂಟೀರಿಯರ್‌ ಡಿಸೈನಿಂಗ್‌ ಕೋರ್ಸ್‌ಗೆ ಸೇರಿಕೊಂಡಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಯೊಬ್ಬರು ತಿಳಿಸಿದರು. ಮರಣೋತ್ತರ ಪರೀಕ್ಷೆ ನಣತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next