Advertisement

ಎಸ್‌.ಎಲ್‌.ಭೈರಪ್ಪಗೆ ನೃಪತುಂಗ ಪ್ರಶಸ್ತಿ

06:00 AM Dec 15, 2017 | Team Udayavani |

ಬೆಂಗಳೂರು: ಕನ್ನಡದ ಜ್ಞಾನಪೀಠವೆಂದೇ ಗುರುತಿಸಿಕೊಂಡಿರುವ ನೃಪತುಂಗ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್‌ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಹಿರಿಯ ಕಾದಂಬರಿಕಾರ ಡಾ.ಎಸ್‌.ಎಲ್‌.ಭೈರಪ್ಪ ಅವರನ್ನು 2017ನೇ ಸಾಲಿನ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು 7 ಲಕ್ಷ ರೂ.ನಗದು, ಫ‌ಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ. (ಜ್ಞಾನಪೀಠ ಪುರಸ್ಕಾರಕ್ಕೆ 10 ಲಕ್ಷ ರೂ.ನಗದು, ವಾಗೆªàವಿಯ ಕಂಚಿನ ಪ್ರತಿಮೆ ನೀಡಲಾಗುತ್ತದೆ.)

Advertisement

ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ವಿದ್ವಾಂಸ ಡಾ.ವೀರಣ್ಣ ರಾಜೂರ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಡಾ.ಎ.ಎನ್‌.ಪ್ರಕಾಶ್‌ಗೌಡ, ಕಾರ್ಮಿಕ ಕಲ್ಯಾಣಾಧಿಕಾರಿ ವಿಜಯಕುಮಾರ್‌, ಕೆಎಸ್‌ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ಇದ್ದರು.ಈ ಹಿಂದೆ ದೇ.ಜವರೇಗೌಡ, ಪಾಟೀಲ ಪುಟ್ಟಪ್ಪ, ಜಿ.ಎಸ್‌.ಶಿವರುದ್ರಪ್ಪ, ಸಿ.ಪಿ.ಕೃಷ್ಣಕುಮಾರ್‌, ಎಂ.ಎಂ.ಕಲಬುರ್ಗಿ, ಡಾ.ಚಿದಾನಂದಮೂರ್ತಿ, ಸಾರಾ ಅಬೂಬಕ್ಕರ್‌, ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ ಹಾಗೂ ಟಿ.ಬಿ.ವೆಂಕಟಾಚಲಶಾಸಿŒ ಅವರು ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು.

ಮಯೂರವರ್ಮ ಸಾಹಿತ್ಯ ಪ್ರಶಸ್ತಿ
2017ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ರಾಮಲಿಂಗೇಶ್ವರ (ಸಿಸಿರಾ), ಡಾ.ಸಿ.ನಂದಿನಿ ಹಾಗೂ ಶಾಂತಿ ಕೆ.ಅಪ್ಪಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ 45 ವರ್ಷದೊಳಿನ ಸಾಹಿತಿಗಳಿಗೆ ಪ್ರಶಸ್ತಿ ನೀಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿಯು 25 ಸಾವಿರ ರೂ.ನಗದು, ಫ‌ಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next