Advertisement

ಅಭಿವೃದ್ಧಿ ಹೆಸರಲ್ಲಿ ಸಚಿವರಿಂದ ಪಕ್ಷಪಾತ; ವಿನಯ್‌

04:40 PM Jun 22, 2022 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಹೇಳುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಬಡವರಿಗಾಗಿ ಮಂಜೂರಾಗಿದ್ದ ವಸತಿ ಸೌಲಭ್ಯವನ್ನು ರದ್ದುಗೊಳಿಸಿ ತಮ್ಮ ಬೆಂಬಲಿಗರಿಗೆ ಅನುಕೂಲ ಮಾಡಿಕೊಟ್ಟು, ಅರ್ಹರಿಗೆ ವಂಚನೆ ಮಾಡಿದ್ದಾರೆ ಎಂದು ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಆರೋಪಿಸಿದರು.

Advertisement

ತಾಲೂಕಿನ ನಂದಿ ಹೋಬಳಿಯ ಗೊಲ್ಲಹಳ್ಳಿ ಗ್ರಾಪಂನ ನಾಸ್ತಿಮ್ಮನಹಳ್ಳಿ ಗ್ರಾಮದಲ್ಲಿ “ನಮ್ಮ ನಡೆ ಗ್ರಾಮ ಕಡೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾಯಿತ ಪ್ರತಿನಿಧಿಗಳು ಅಭಿವೃದ್ಧಿ ವಿಷಯದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಕ್ಷೇತ್ರದ ಶಾಸಕರು ಹಾಗೂ ಸಚಿವರಾಗಿರುವ ಡಾ.ಕೆ. ಸುಧಾಕರ್‌ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿಯನ್ನು ಕಡೆಗಣಿಸಿ ಕೇವಲ ರಾಜಕಾರಣ ಮಾಡುತ್ತಾ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿದ್ದ ಫಲಾನುಭವಿಗಳಿಗೆ ಪ್ರತಿ ತಮ್ಮ ಬೆಂಬಲಿಗರಿಗೆ ಮನೆ ಮಂಜೂರು ಮಾಡುವ ಮೂಲಕ ಬಡವರಿಗೆ ತೊಂದರೆ ನೀಡಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಮಾದರಿಯಾಗಿ ಪರಿವರ್ತಿಸಬೇಕು ಎಂದು ಸಂಕಲ್ಪ ಮಾಡಿದ್ದೇನೆ. ಅದಕ್ಕಾಗಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಭಾಗದ ಶಾಸಕರು ಕೇವಲ ತಮ್ಮೊಂದಿಗೆ ಇರುವ ಜನರಿಗೆ ಮಾತ್ರ ಸೌಲಭ್ಯಗಳನ್ನು ನೀಡುವ ಮೂಲಕ ಪಕ್ಷಪಾತ ಮಾಡುತ್ತಿದ್ದಾರೆ.

ಕ್ಷೇತ್ರದಿಂದ ಅವರನ್ನು ಹೊರಹಾಕುವ ಕೆಲಸವನ್ನು ಈ ಭಾಗದ ಮತದಾರರು ಮಾಡುತ್ತಾರೆ ಎಂದರು. ಈಗಾಗಲೇ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಶಾಲಾ ಮಕ್ಕಳಿಗಾಗಿ ಅನುಕೂಲ ಕಲ್ಪಿಸುವ ಸಲುವಾಗಿ ಶಾಲಾ ಬ್ಯಾಗ್‌ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಬಡವರು ಮಕ್ಕಳನ್ನು ಶಾಲೆಯಲ್ಲಿ ಸೇರಿಸಲು ಶುಲ್ಕವನ್ನು ಸಹ ಪಾವತಿಸಲು ನೆರವು ನೀಡಲಾಗಿದೆ ಎಂದು ಹೇಳಿದರು.

Advertisement

ಕ್ಷೇತ್ರದ ಜನರ ಮನೆ ಮಗನಾಗಿ ಸೇವೆ ಸಲ್ಲಿಸಲು ಸದಾ ಸಿದ್ಧನಿದ್ದೇನೆ ಪ್ರತಿಯೊಂದು ಹಳ್ಳಿ ಮತ್ತು ನಗರ ಪ್ರದೇಶವನ್ನು ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಅಭಿವೃದ್ಧಿಗೊಳಿಸುವುದು ನನ್ನ ಮುಖ್ಯ ಗುರಿ ಅದಕ್ಕಾಗಿ ಎಲ್ಲರೂ ಸಹಕಾರ ಮತ್ತು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕಿ ಅನುಸೂಯಮ್ಮ ಮಾತನಾಡಿ, ಕ್ಷೇತ್ರದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಅವರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಬೇಕೆಂದು ಗ್ರಾಮಸ್ಥರಿಗೆ ಮನವಿ ಮಾಡಿ ಮುಂದಿನ ಚುನಾವಣೆಯಲ್ಲಿ ಇವರಿಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಮಿಕ ವಿಭಾಗ ನಾರಾಯಣಸ್ವಾಮಿ, ಕಾಂಗ್ರೆಸ್‌ ಹಿರಿಯ ಮುಖಂಡ ವಕೀಲ ನಾರಾಯಣಸ್ವಾಮಿ,ಮಾಜಿ ಜಿಪಂ ಸದಸ್ಯೆ ನಾರಾಯಣಮ್ಮ, ಮಂಗಳ ಪ್ರಕಾಶ್‌, ಮಹಿಳಾ ನಾಯಕಿ ಶಾಂತಿ,ಕಲಾವತಿ, ಶಾಹೀನ, ಲಕ್ಷ್ಮಣ್‌, ಸತೀಶ್‌, ಮಹೇಂದ್ರ ಗಜೇಂದ್ರ, ನಾಗೇಶ್‌, ಹರೀಶ್‌, ಸಂತೋಷ್‌, ಮಧುಸ್ವಾಮಿ ಹಾಗೂ ಗೊಲ್ಲಹಳ್ಳಿ ಗ್ರಾಪಂನ ಕಾಂಗ್ರೆಸ್‌ ಮುಖಂಡರಿದ್ದರು.

ಮೂಲ ಸೌಕರ್ಯ ಒದಗಿಸಲು ಪಕ್ಷ ಸಿದ್ಧ
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಗಡಿ ಗ್ರಾಮವಾಗಿರುವ ಗೊಲ್ಲಹಳ್ಳಿ ಗ್ರಾಪಂನ ನಾಸ್ತಿಮ್ಮನಹಳಿ ಗ್ರಾಮವನ್ನು ಸಂಪೂರ್ಣವಾಗಿ ಕ್ಷೇತ್ರದ ಶಾಸಕರು ಹಾಗೂ ಗ್ರಾಪಂ ಸದಸ್ಯರು ಕಡೆಗಣಿಸಿದ್ದಾರೆ. ಇಲ್ಲಿನ ಜನ ಮೂಲ ಸೌಲಭ್ಯಗಳಿಗಾಗಿ ಪರದಾಡುವಂತಾಗಿದೆ. ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷ ಸದಾಸಿದ್ಧವಾಗಿದೆ ಗ್ರಾಮಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸಲು ಪಕ್ಷ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಸದಸ್ಯ ವಿನಯ್‌ ಎನ್‌ ಶ್ಯಾಮ್‌ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next