Advertisement

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

12:16 AM May 13, 2024 | Team Udayavani |

ಬೀದರ್ : ರಾಜ್ಯದ ಇತಿಹಾಸದಲ್ಲೇ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.

Advertisement

ಒರಿಸ್ಸಾದಿಂದ- ಬೀದರ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಕೆಎ – 38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ಸ್‌ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಔರಾದ ತಾಲೂಕಿನ ವನಮಾರಪ್ಪಳ್ಳಿ ಚೆಕ್ ಪೊಸ್ಟ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಗಾಂಜಾವನ್ನು ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next