ಬೀದರ: ಜಿಲ್ಲೆಯಲ್ಲಿ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಹೇಳಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭೂ ಮಾಪಕರ ನೇಮಕಾತಿ ಪೂರ್ಣಗೊಂಡಿದೆ. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯಲ್ಲಿದ್ದು, ತರಬೇತಿ ಪೂರ್ಣಗೊಳಿಸಿ ಬರುವ ಅವರಿಂದ ಉತ್ತಮ ರೀತಿಯಲ್ಲಿ ಕೆಲಸಗಳು ನಡೆಯಬೇಕು ಎಂದು ತಿಳಿಸಿದರು.
ಬೀದರ ಜಿಲ್ಲೆಯಲ್ಲಿ ಈಗಾಗಲೇ 55 ಕಂದಾಯ ಗ್ರಾಮ ಗುರುತಿಸಲಾಗಿದೆ. ಈ ಪೈಕಿ ಅಂತಿಮ ಅ ಧಿಸೂಚನೆಯಾದ ಗ್ರಾಮಗಳು 12 ಇವೆ. ಅಂತಿಮ ಅಧಿ ಸೂಚನೆಯಾಗಬೇಕಾದ ಗ್ರಾಮಗಳು 20 ಇರುತ್ತವೆ. ಪ್ರಾಥಮಿಕ ಅ ಧಿಸೂಚನೆಯಾಗಬೇಕಾದ ಗ್ರಾಮಗಳು 23 ಇರುತ್ತವೆ. ಜಿಲ್ಲೆಯಲ್ಲಿ ಭೂ ಮಾಪಕರ ಕೊರತೆಯಿದೆ. ಆದರೂ ಈ ಕಾರ್ಯ ಆದ್ಯತೆ ಮೇರೆಗೆ ನಡೆಸಲಾಗುವುದು ಎಂದು ಅ ಧಿಕಾರಿಗಳು ಮಾಹಿತಿ ನೀಡಿದರು.
ಡಿಸಿ ರಾಮಚಂದ್ರನ್ ಆರ್. ಮಾತನಾಡಿ, ಭೂ ಸ್ವಾ ಧೀನ ಪ್ರಕರಣಗಳಲ್ಲಿ ಹೆಚ್ಚುವರಿ ಪರಿಹಾರಕ್ಕಾಗಿ ನ್ಯಾಯಾಲಯಕ್ಕೆ ಮೊರೆ ಹೋಗಿರುವ ಕೆಲವು ಪ್ರಕರಣ ನೇರವಾಗಿ ಮಾ.27ರಂದು ನಡೆಯುವ ಲೋಕ್ ಅದಾಲತ್‌ನಲ್ಲಿ ಇಟ್ಟು ವಿಲೇವಾರಿಗೆ ಕ್ರಮ ವಹಿಸಲಾಗುವುದು ತಿಳಿಸಿದರು.
ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿ ಕಾರಿಗಳು ಮಾತನಾಡಿ, ಶಾದಿಭಾಗ್ಯ ಯೋಜನೆಗೆ ಹಳೇ ಅನುದಾನ ಬರುವುದು ಬಾಕಿ ಇದೆ. ಸಿಖ್ ಸಮುದಾಯದ ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ಬರುವುದು ಬಾಕಿಯಿದೆ. ಕ್ರೈಸ್ತ ಅಭಿವೃದ್ಧಿ ಯೋಜನೆಯಡಿ ಎಲ್ಲ ಕ್ರೈಸ್ತಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ನೂರು ಪ್ರತಿಶತ ಸಾಧನೆಯಾಗಿದೆ ಎಂದು ತಿಳಿಸಿದರು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ 971 ವಿದ್ಯಾರ್ಥಿಗಳಿಗೆ ಸಾಲ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಲ್ಪಂಸಂಖ್ಯಾರ ಕಲ್ಯಾಣ ಅಭಿವೃದ್ಧಿ ನಿಗಮದ ಅ ಧಿಕಾರಿಗಳು ಸಭೆಗೆ ತಿಳಿಸಿದರು. ಈ ವೇಳೆ ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್., ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್., ತಹಶೀಲ್ದಾರ್ ಗಂಗಾದೇವಿ ಸಿ.ಎಚ್. ಇತರರಿದ್ದರು.