Advertisement

ಕಟ್ಟುನಿಟ್ಟಾಗಿ ಕಳ್ಳಭಟ್ಟಿ ಹಾವಳಿ ತಡೆಗಟ್ಟಿ

11:41 AM Apr 26, 2020 | Naveen |

ಬೀದರ: ಪೊಲೀಸ್‌, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳ ಸಹಕಾರ ಪಡೆದು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಳ್ಳಭಟ್ಟಿ ಹಾವಳಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ಹಾಗೂ ಮಿಶ್ರ ಮದ್ಯದ ತಯಾರಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸ್ಥಾಪಿಸಲಾದ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮದ್ಯಪಾನ ನಿಷೇಧದ ದುರ್ಬಳಕೆಯನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಪಡೆದು ಕೆಲವು ಕಡೆ ಕಳ್ಳಭಟ್ಟಿ ತಯಾರಿಸುತ್ತಿವೆ ಎನ್ನುವ ದೂರುಗಳಿವೆ. ಆದ್ದರಿಂದ ಇಂತಹ ಕಳ್ಳಭಟ್ಟಿ ಮತ್ತು ಅಕ್ರಮ ಹೆಂಡ,ಮಿಶ್ರ ಮದ್ಯದ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಬಕಾರಿ ಇಲಾಖೆ ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಲ್ಲ ತಾಲೂಕುಗಳಲ್ಲಿ ಅಬಕಾರಿ ಇಲಾಖೆ ನಿಯಂತ್ರಣ ಕೊಠಡಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡಲು ಅನುಕೂಲವಾಗುವಂತೆ ದೂರವಾಣಿ ಅಥವಾ ಮೊಬೈಲ್‌ ಸಂಖ್ಯೆ ಕೊಡಬೇಕು ಎಂದು ಸೂಚಿಸಿದರು. ಅಬಕಾರಿ ಉಪ ಆಯುಕ್ತ ಈರಣ್ಣ ಬಾಗೇವಾಡಿ ಮಾತನಾಡಿ, ಜಿಲ್ಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಕಡೆ ದಾಳಿ ಮಾಡಿ ಮೊಕದ್ದಮೆ ದಾಖಲಿಸಿ ಮದ್ಯ, ಬೀಯರ್‌, ಕಳ್ಳಭಟ್ಟಿ ಸಾರಾಯಿ, ಸೇಂದಿ ಅಲ್ಲದೇ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದರು. ಎಸ್‌ಪಿ ಡಿ.ಎಲ್‌. ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯಶ್ರೀಧರ, ಅಬಕಾರಿ ಉಪ ಅಧೀಕ್ಷಕ ಅನಿಲಕುಮಾರ ಪೋದ್ದಾರ ಮತ್ತು ಜಿಲ್ಲೆಯ ಅಬಕಾರಿ ನಿರೀಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next