Advertisement
ತಾಲೂಕಿನ ಬರ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರ ಬೆಳೆ ಪರಿಹಾರ ಸಹಿತ ಬರ ನಿರ್ವಹಣೆ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗಿದೆ ಎಂದರು.
ಬೆಳೆ ಹಾನಿಗೆ ಸರಕಾರ ಕೂಡಲೇ ಪ್ರತಿ ಎಕ್ರೆಗೆ 25 ಸಾವಿರ ರೂ.ನಂತೆ ಪರಿಹಾರ ಘೋಷಿಸಬೇಕು. ರೈತರ 1ರಿಂದ 1.5 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ರೈತರಿಂದ ಸುಲಿಗೆ
ಬರದ ಸಂಕಷ್ಟ ಸಂದರ್ಭದಲ್ಲಿ ವಿದ್ಯುತ್ ಶಕ್ತಿ ನಿಗಮ ರೈತರಿಂದ ಸುಲಿಗೆಗಿಳಿದಿದೆ. ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಕೆಗಾಗಿ ರೈತರೇ 1 ಲಕ್ಷ ರೂ. ವರೆಗೆ ಖರ್ಚು ಮಾಡಬೇಕಿದೆ. ಮತ್ತೂಂದೆಡೆ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕೃಷಿಕರು ಇರುವ ಬೆಳೆಯನ್ನೂ ಕಳೆದುಕೊಂಡಿದ್ದು, ಈಗ 7 ಗಂಟೆಗೆ ವಿದ್ಯುತ್ ಪೂರೈಸಲಾಗುವುದು ಎಂದು ಸಿಎಂ ಹೇಳುತ್ತಿದ್ದಾರೆ. 5 ಗಂಟೆ ವಿದ್ಯುತ್ ನೀಡಿದ್ದರೂ ಇಂದು ರೈತರು ಬೆಳೆಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದರು.