Advertisement

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು, 44 ಹೊಸ ಪ್ರಕರಣ ಪತ್ತೆ

10:17 PM Sep 25, 2020 | sudhir |

ಬೀದರ್ : ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, 44 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

Advertisement

ಕಮಲನಗರ ತಾಲೂಕಿನ ಸೋನಾಳ ಗ್ರಾಮದ 70 ವರ್ಷದ ವ್ಯಕ್ತಿ ಮತ್ತು ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದ 70 ವರ್ಷದ ವ್ಯಕ್ತಿ ಗುಣಮುಖರಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 151ಕ್ಕೆ ಏರಿಕೆ ಆಗಿದೆ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 6068ಕ್ಕೆ ವೃದ್ಧಿಸಿದೆ. ಶುಕ್ರವಾರ 28 ಮಂದಿ ಸೇರಿ ಈವರೆಗೆ 5405 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 508 ಸಕ್ರೀಯ ಪ್ರಕರಣಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next