Advertisement

Bidar: ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

04:44 PM Dec 03, 2024 | Team Udayavani |

ಬೀದರ: ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಮಂಗಳವಾರ ನಗರದಲ್ಲಿ ರಾಷ್ಟ್ರೀಯ ಬಸವ ದಳ ನೇತೃತ್ವದಲ್ಲಿ ವಿವಿಧ ಬಸವಪರ ಸಂಘಟನೆಗಳಿಂದ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

Advertisement

ಬೆಂಗಳೂರಿನ ಶ್ರೀ ಚನ್ನಬಸವಾನಂದ ಸ್ವಾಮೀಜಿ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಸದಸ್ಯರು, ಬಸವ ಭಕ್ತರು ಯತ್ನಾಳ್ ಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ಮೂಲಕ ತೆರಳಿ ವಿಧಾನಸಭೆ ಅಧ್ಯಕ್ಷರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಅಧಿಕಾರ ಮದ ಮತ್ತು ಧನಮದದಿಂದ ಶಾಸಕ ಯತ್ನಾಳ್ ಅವರಿಗೆ ಪಿತ್ತ ನೆತ್ತಿಗೇರಿದೆ. “ಬಸವಣ್ಣನವರು ಹೊಳ್ಯಾಗ್ ಹಾರಿದ್ರು” ಎನ್ನುವ ಕುರಿತು ಯತ್ನಾಳ್ ಬಸವ ಭಕ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next