Advertisement
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಮೃತ ಸಚಿನ್ (26) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಏಳು ಪುಟಗಳ ಸಮಗ್ರವಾದ ಲೆಟರ್ ಬರೆದಿರುವ ಸಚಿನ್ ರೈಲ್ವೇ ಹಳಿಗೆ ಬಿದ್ದು ಜೀವ ಕಳೆದುಕೊಂಡಿದ್ದಾರೆ. ರೈಲ್ವೆ ಟ್ರ್ಯಾಕ್‌ನಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
Related Articles
Advertisement
ಕಲಬುರಗಿಯ ಮಾಜಿ ಕಾರ್ಪೊರೇಟ್ ರಾಜು ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ ಆರು ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ.
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಪತ್ರದಲ್ಲಿರುವ ಆರೋಪಿಗಳನ್ನು ಕರೆಸುವಂತೆ ಒತ್ತಾಯ ಮಾಡಿದರು. ಪತ್ರದಲ್ಲಿ ಉಲ್ಲೇಖವಾಗಿರುವ ರಾಜು ಕಪನೂರು ಸೇರಿ ಎಲ್ಲರನ್ನು ಇಲ್ಲಿಗೆ ಕರೆಸಿ ಎಂದು ಕುಟುಂಬಸ್ಥರು ಪಟ್ಟು ಹಿಡಿದ ಘಟನೆ ನಡೆಯಿತು. ಅವರು ಬರುವವರೆಗೆ ಇಲ್ಲಿಂದ ಮೃತದೇಹ ತೆಗೆದುಕೊಂಡು ಹೋಗಲು ಬಿಡಲ್ಲ ಎಂದು ಪಟ್ಟು ಹಿಡಿದರು. ನ್ಯಾಯಕ್ಕಾಗಿ ರೈಲು ತಡೆದು ಪಟ್ಟು ಹಿಡಿದುಕೊಂಡು ಕುಳಿತ ಕುಟುಂಬಸ್ಥರ ವಿರೋಧದ ನಡುವೆಯೇ ಕೊನೆಗೆ ಮೃತದೇಹವನ್ನು ಬ್ರಿಮ್ಸ್ ಶವಗಾರಕ್ಕೆ ರವಾನೆ ಮಾಡಲಾಯಿತು.