Advertisement

ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

02:32 PM Apr 22, 2019 | Team Udayavani |

ಬೀದರ: ಬೀದರ ಲೋಕಸಭಾ ಕ್ಷೇತ್ರಕ್ಕೆ ಏ.23ರಂದು ಮತದಾನ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್‌. ಮಹಾದೇವ ಎಲ್ಲ ಸಹಾಯಕ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ವಿಧಾನಸಭಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಸೆಕ್ಟರ್‌ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಮಾತನಾಡಿದ ಅವರು, ಮತದಾನ ದಿನದಂದು ಕಾಲಕಾಲಕ್ಕೆ ಮತದಾನದ ಅಂಕಿ ಅಂಶಗಳನ್ನು ಕಳುಹಿಸಲು ಸಹಾಯಕ ಚುನಾವಣಾಧಿಕಾರಿಗಳು ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಸೆಕ್ಟರ್‌ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಅಂಕಿ ಅಂಶಗಳ ಮಾಹಿತಿ ಪಡೆಯಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆಗೆ ನಿಯೋಜನೆಗೊಂಡ ಪ್ರತಿಯೊಬ್ಬ ಸೆಕ್ಟರ್‌ ಅಧಿಕಾರಿಗಳು ಆಯೋಗದ ನಿರ್ದೇಶನದಂತೆ ಕೆಲಸ ನಿರ್ವಹಿಸಬೇಕು. ಮತದಾನ ದಿನ ಮತದಾನಕ್ಕೂ ಮುಂಚಿತವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಅಣಕು ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿರುವಂತೆ ತಾವುಗಳು ಪರಿಶೀಲಿಸಬೇಕು. ಆಯಾ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಅಧಿಕಾರಿಗಳಿಗೆ ಈ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಸೆಕ್ಟರ್‌ ಅಧಿಕಾರಿಗಳಿಗೆ ಸೂಚಿಸಿದರು.

ಸಹಾಯ ಪಡೆಯಿರಿ: ವಿದ್ಯುನ್ಮಾನ ಯಂತ್ರಗಳನ್ನು ಸರಿಯಾಗಿ ಜೋಡಿಸಲು ಒತ್ತು ಕೊಡಬೇಕು. ಅಣಕು ಮತದಾನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ನಂತರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಬೇಕು. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳಿಗೆ ಸರಿಯಾಗಿ ತಿಳಿ ಹೇಳಬೇಕು. ಏನಾದರೂ ಸಮಸ್ಯೆ ಎದುರಾದರೆ ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು ಮತ್ತು ತಾಂತ್ರಿಕ ಸಹಾಯಕರ ಸಹಾಯ ಪಡೆಯಬೇಕು ಎಂದು ತಿಳಿಸಿದರು.

ನಿಷೇಧಾಜ್ಞೆ ಜಾರಿ: ಮತಗಟ್ಟೆ ವ್ಯಾಪ್ತಿಯ ಸುತ್ತಲು 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತದಾರರನ್ನು ಹೊರತುಪಡಿಸಿ ಇತರೆ ಯಾರಿಗೂ ಈ ವ್ಯಾಪ್ತಿಯಲ್ಲಿ ಇರಲು ಅವಕಾಶ ಕೊಡಬಾರದು. 200 ಮೀಟರ್‌ ವ್ಯಾಪ್ತಿಯಲ್ಲಿ 144 ಸೆಕ್ಷನ್‌ ಜಾರಿಯಲ್ಲಿದ್ದು ಈ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳು ಸಹ ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಚುನಾವಣಾಧಿಕಾರಿಗಳಾದ ಶಂಕರ ವಣಕ್ಯಾಳ ಹಾಗೂ ಇತರರು ಇದ್ದರು.

Advertisement

ಮತದಾನ ಎಲ್ಲರಹಕ್ಕು: ಹೂಗಾರ
ಕಮಲನಗರ:
ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಮಹತ್ತರವಾಗಿದ್ದು, ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ವ್ಯವಸ್ಥೆ ಪರಿವರ್ತನೆಗಾಗಿ ಈ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ, ನಿರ್ಭಯವಾಗಿ ಮತ ಚಲಾಯಿಸಬೇಕು. ಎಂದು ಎಬಿವಿಪಿ ತಾಲೂಕು ಸಂಚಾಲಕ ಉಮೇಶ ಹೂಗಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next