Advertisement

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

03:06 PM Dec 11, 2024 | Team Udayavani |

ಬೀದರ್ : ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದ ಉಸ್ತುವಾರಿ ಸಚಿವರ ಕಾರ್ಯಾಲಯದ ಹೊರಗೆ ಕಳೆದ ಎರಡು ವರ್ಷಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರಂಜಾ ಸಂತ್ರಸ್ತರು ಬುಧವಾರ ಆತ್ಮಹತ್ಯೆ ಅಣಕು ಪ್ರದರ್ಶನ ಮಾಡಿ ಸರ್ಕಾರದ ಗಮನ ಸೆಳೆದರು. ಈ ವೇಳೆ ಪೊಲೀಸರು ಮಹಿಳೆಯರು ಸೇರಿದಂತೆ 30ಕ್ಕೂ ಹೆಚ್ಚು ಜನ ಸಂತ್ರಸ್ತರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೇಬುದು ಮೂರು ದಶಕಗಳ ಬೇಡಿಕೆಯಾಗಿದ್ದು, ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಹೋರಾತ್ರಿ ಧರಣಿ ಮಾಡಲಾಗುತ್ತಿದೆ.

ಬೇಡಿಕೆ ಈಡೇರಿಕೆಗೆ ಸರ್ಕಾರದ ನಿರ್ಲಕ್ಷ ಹಿನ್ನಲೆ 15 ದಜನಗಳ ಗಡುವು ನೀಡಿದ್ದ ಸಮಿತಿ ವೈಜ್ಞಾನಿಕ ಪರಿಹಾರ ನೀಡದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದರು. ಬುಧವಾರ ಧರಣಾ ಸ್ಥಳದಲ್ಲಿ ಹಗ್ಗವನ್ನು ಕುತ್ತಿಗೆಗೆ ಸುತ್ತಿಕೊಂಡು ಆತ್ಮಹತ್ಯೆ ನಕಲು ಪ್ರದರ್ಶನ ಮಾಡಿ, ಜಿಲ್ಲಾಧಿಕಾರಿ ಕಚೇರಿಗೆ ರ‍್ಯಾಲಿ ಮೂಲಕ ತೆರಳುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next