Advertisement

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

03:15 PM Dec 31, 2024 | Team Udayavani |

ಬೀದರ: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಯ ನಿಗೂಢ ಸಾವಿನ ಬಗ್ಗೆ ತನಿಖೆ ಮತ್ತು ಮೃತ ಕುಟುಂಬಕ್ಕೆ ಪರಿಹಾರ ನೀಡಿ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಡಿ.31ರ ಮಂಗಳವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ‌ ನಡೆಸಲಾಯಿತು.

Advertisement

ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಸಮಾಜದ ಮುಖಂಡರು ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ನಂತರ ಗೃಹ‌ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಸಚಿನ್ ಪಾಂಚಾಳ್ ಆತ್ಮಹತ್ಯೆ ನಗೂಢ ಸಾವು ಘಟನೆ ವಿಷಾಧನೀಯ. ಬಡ ಸಮಾಜದಲ್ಲಿ ಹುಟ್ಟಿದ ಯುವಕ ತನ್ನ ಜೀವನಕ್ಕಾಗಿ ಮಾಡುವ ಕೆಲಸದ ವ್ಯವಹಾರದಲ್ಲಿ ಏರುಪೇರು ನಿಗೂಢ ಸಾವಿನಲ್ಲಿ ಅಂತ್ಯವಾಗಿದೆ. ಸಚಿನ್ ಮೇಲೆ ಅವಲಂಬಿತ ಕುಟುಂಬದ ಸದಸ್ಯರು ಈಗ ಅನಾಥವಾಗಿ ಬೀದಿ ಪಾಲಾಗುವ ಸ್ಥಿತಿ ಬಂದಿದೆ. ಗುತ್ತಿಗೆದಾರನ ಸಾವಿನ ಸಮಗ್ರ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಯುವ ಘಟಕದ ಅದ್ಯಕ್ಷ ಪ್ರಶಾಂತ ವಿಶ್ವಕರ್ಮ, ಪ್ರಮುಖರಾದ ಸೋಮನಾಥ ಪಾಂಚಾಳ್, ಸುಲೋಚನಾ ವಿಶ್ವಕರ್ಮ, ರಾಜಕುಮಾರ ಪಾಂಚಾಳ್ ಮತ್ತು ಕೃಷ್ಣಮಚಾರಿ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next