Advertisement

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

08:10 PM Dec 12, 2024 | Team Udayavani |

ಬೀದರ್ : ಸಮಾನ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದಲ್ಲಿ ಕಳೆದ ಎರಡು ವರ್ಷದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾರಂಜಾ ಸಂತ್ರಸ್ತರು ಹೋರಾಟವನ್ನು ತೀವ್ರಗೊಳಿಸಿದ್ದು, ಗುರುವಾರ(ಡಿ12) ಮೂವರು ರೈತರು ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ.

Advertisement

ಕಾರಂಜಾ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ರಾಜಪ್ಪ ಕಮಲಪುರ ಹಾಗೂ ರಾಜಶೇಖರ ಖೇಣಿ ರಂಜೋಳ ವಿಷ ಸೇವಿಸಿದ್ದು, ಇಲ್ಲಿನ ಬ್ರಿಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರು ವೈಜ್ಞಾನಿಕ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ರೈತರು ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಎರಡು ವಾರದಲ್ಲಿ ಬೇಡಿಕೆಗಳನ್ನು ಬಗೆಹರಿಸದಿದ್ದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂತ್ರಸ್ತರು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದರು. ಗಡವು ಮುಗಿದ ಹಿನ್ನಲೆ ಬುಧವಾರ ಹೆಗಲಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯ ಅಣುಕು ಪ್ರದರ್ಶನ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು. ಈ ವೇಳೆ 30 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಪ್ರತಿಭಟನೆಯ ಮರು ದಿನವೇ ಈಗ ಮೂವರು ಸಂತ್ರಸ್ತ ರೈತರು ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾರಂಜಾ ಸಂತ್ರಸ್ತರ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next