Advertisement

ಬೀದರ್: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕಳ್ಳತನ ಪ್ರಕರಣದ ಆರೋಪಿಗಳು

08:47 PM Nov 29, 2020 | Mithun PG |

ಹುಮನಾಬಾದ್: ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ವೇಳೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ರವಿವಾರ ಸಂಜೆ ಪಟ್ಟಣ ಹೊರವಲಯದಲ್ಲಿ ನಡೆದಿದ್ದು, ಘಟನೆಯಲ್ಲಿ ಪಿಎಸ್‌ಐ ಮತ್ತು ಸಿಬ್ಬಂದಿಗಳಿಗೆ ಗಾಯಗಳಾಗಿವೆ.

Advertisement

ಬೀದರ್ ನಗರದ ಇರಾನಿ ಬಡಾವಣೆಯ ಇಬ್ಬರು ಆರೋಪಿಗಳು ಎಂದು ಮಾಹಿತಿ ಲಭ್ಯವಾಗಿದೆ. ಈ ಆರೋಪಿಗಳು ಮನ್ನಾಎಖೇಳ್ಳಿ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಿದ್ದು, ಈ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದ ಹಿನ್ನಲೆಯಲ್ಲಿ ಪೊಲೀಸರು ಗಾಳಿಯನ್ನು ಮೂರು ಗುಂಡು ಹಾರಿಸಿದ್ದಾರೆ. ಈ ಕುರಿತು ಎಎಸ್‌ಪಿ ಡಾ. ಗೋಪಾಲ್ ಬ್ಯಾಕೋಡ್ ‘ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ಇಬ್ಬರು ಆರೋಪಿಗಳು ಮಿತ್ರ ಪೊಲೀಸ್ ಎಂದು ಗುರುತಿನ ಚೀಟಿ ತಯಾರಿಸಿಕೊಂಡು ಜನರನ್ನು ಯಾಮಾರಿಸುವ ಕೆಲಸ ಮಾಡುತ್ತಿರುವ ಬಗ್ಗೆ ಕೂಡ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಪಿಎಸ್‌ಐ ರವಿಕುಮಾರ, ಅಪರಾಧ ವಿಭಾಗದ ಪಿ.ಎಸ್.ಐ ಕಿರಣಕುಮಾರ ಹಾಗೂ ಸಿಬ್ಬಂದಿಗಳಾದ ಭಗವಾನ ಹಾಗೂ ನವೀನ ಅವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರ ಪಡೆದಿದ್ದಾರೆ.

ಇದನ್ನೂ ಓದಿ:  ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು: ತೀವ್ರ ಹೋರಾಟದ ಎಚ್ಚರಿಕೆ

ಘಟನೆಯ ವಿವರ:

Advertisement

ಬೈಕ್ ಮೇಲೆ ಸರ ಕಳ್ಳರು ಸಂಚರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ರವಿಕುಮಾರ್, ಅಪರಾಧ ವಿಭಾಗದ ಪಿಎಸ್‌ಐ ಕಿರಣಕುಮಾರ್, ಸಿಬ್ಬಂದಿಗಳಾದ ಭಗವಾನ, ನವೀನ ಹಾಗೂ ಮಲ್ಲು ನೇತೃತ್ವದಲ್ಲಿ ಪಟ್ಟಣದ ಹೊರವಲಯದ ಹೆದ್ದಾರಿಯಲ್ಲಿ ಬಂಧಿಸಲು ಮುಂದಾದಾಗ ಇಬ್ಬರು  ಆರೋಪಿಗಳು ಹಾಗೂ ಪೊಲೀಸರ ಮಧ್ಯ ಗಲಾಟೆ ಉಂಟಾಗಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಆರೋಪಿಗಳು ಪೊಲೀಸರ ಮೇಲೆಯೇ ಹರಿತವಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಿಎಸ್‌ಐ ರವಿಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:  ಸರಣಿ ಸೋತರೂ, ಹೊಸ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !

Advertisement

Udayavani is now on Telegram. Click here to join our channel and stay updated with the latest news.

Next