Advertisement

ಬೀದರ: 1760 ಪರೀಕ್ಷಾರ್ಥಿಗಳು ಗೈರು

08:44 AM Jun 28, 2020 | Suhan S |

ಬೀದರ: ಜಿಲ್ಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿಗಣಿತ ಪರೀಕ್ಷೆಗೆ ಹೆಸರು ನೋಂದಾಯಿಸಿದ ಒಟ್ಟು 26,181 ವಿದ್ಯಾರ್ಥಿಗಳ ಪೈಕಿ 24,421 ವಿದ್ಯಾರ್ಥಿಗಳು ಹಾಜರಾಗಿದ್ದು, 1760 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಜರಾದ ವಿದ್ಯಾರ್ಥಿಗಳಲ್ಲಿ ನೆರೆ ರಾಜ್ಯದ 16 ಮತ್ತು ವಲಸೆ ವಿದ್ಯಾರ್ಥಿಗಳು 339 ಸೇರಿದ್ದಾರೆ. ಕಂಟೈನ್ಮೆಂಟ್‌ ಪ್ರದೇಶದ 16 ಮಕ್ಕಳು ಪರೀಕ್ಷೆ ಬರೆದಿದ್ದಾರೆ.

Advertisement

ಅನಾರೋಗ್ಯ ಕಾರಣದಿಂದ ಓರ್ವ ಪರೀಕ್ಷಾರ್ಥಿಗೆ ವಿಶೇಷ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ತಿಳಿಸಿದ್ದಾರೆ. ಸಚಿವ, ಸಂಸದರು ಭೇಟಿ: ನಗರದ ಗುರುನಾನಕ್‌ ಪ್ರೌಢಶಾಲಾ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ ಮತ್ತು ಎಂಎಲ್‌ಸಿ ರಘುನಾಥ ಮಲ್ಕಾಪುರೆ ಭೇಟಿ ನೀಡಿ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು. ಕೋವಿಡ್  ಹಿನ್ನೆಲೆಯಲ್ಲಿ ಶಾಲೆಯಲ್ಲಿ ಕೈಗೊಂಡ ಸುರಕ್ಷತಾ ಕ್ರಮಗಳ ಬಗ್ಗೆ ಮುಖ್ಯಗುರುಗಳಿಂದ ಮಾಹಿತಿ ಪಡೆದರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.

ಡಿಸಿ ಭೇಟಿ: ಡಿಸಿ ರಾಮಚಂದ್ರನ್‌ ಆರ್‌. ಅವರು ಜನವಾಡ ಹತ್ತಿರದ ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದ ಸರ್ಕಾರಿ ಆದರ್ಶ ವಿದ್ಯಾಲಯದ ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next