Advertisement

ಬಸವ ಜಯಂತಿ ಸರಳ ಆಚರಣೆ

01:35 PM Apr 27, 2020 | Naveen |

ಬೀದರ: ಕೋವಿಡ್ ವೈರಸ್‌ನಿಂದ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ರವಿವಾರ ನಗರದಲ್ಲಿ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗೆ ಆದ್ಯತೆ ನೀಡಲಾಯಿತು.

Advertisement

ನಗರದ ಬಸವೇಶ್ವರ ಪ್ರತಿಮೆ ಬಳಿ ಸಚಿವ ಪ್ರಭು ಚವ್ಹಾಣ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು. ಬಳಿಕ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಈ ವೇಳೆ ಮಾತನಾಡಿದ ಸಚಿವ ಚವ್ಹಾಣ, ಬಸವಣ್ಣನ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತವಾಗಿವೆ. ವಿಶ್ವಕ್ಕೆ ಕಾಡುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸಲು ಜಗಜ್ಯೋತಿ ಬಸವಣ್ಣನವರು ನಮಗೆಲ್ಲರಿಗೂ ಶಕ್ತಿ ಕೊಡಲಿ ಮತ್ತು ದಾರಿ ತೋರಲಿ. ಲಾಕ್‌ಡೌನ್‌ ಅವಧಿಯಲ್ಲಿ ಜನರು ಮನೆಯಿಂದ ಹೊರಗೆ ಬಾರದೆ ಶರಣರ ವಚನಗಳನ್ನು ಓದಿ ಬದುಕಿನಲ್ಲಿ ರೂಢಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದರು.

ಸಂಸದ ಭಗವಂತ ಖೂಬಾ, ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ ಮಾತನಾಡಿದರು. ಹಲವು ಗಣ್ಯರು, ಅಧಿಕಾರಿಗಳು ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು. ಈ ವೇಳೆ ಎಲಲರೂ ಸಾಮಾಜಿಕ ಅಂತರ ಕಾಯ್ದುಕೊಂಡರು. ಶಾಸಕರಾದ ಬಂಡೆಪ್ಪ ಖಾಶೆಂಪುರ, ರಹೀಮ್‌ ಖಾನ್‌, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ಸದಸ್ಯೆ ಶಕುಂತಲಾ ಬೆಲ್ದಾಳೆ, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್‌, ಎಸ್‌ಪಿ ನಾಗೇಶ ಡಿ.ಎಲ್‌. ಎಡಿಸಿ ರುದ್ರೇಶ ಗಾಳಿ, ಎಸಿ ಅಕ್ಷಯಶ್ರೀಧರ, ಎಎಸ್‌ಪಿ ಗೋಪಾಲ ಬ್ಯಾಕೋಡ, ಡಿವೈಎಸ್‌ಪಿ ಬಸವೇಶ್ವರ ಹೀರಾ, ಪೌರಾಯುಕ್ತ ಬಿ. ಬಸಪ್ಪ, ಪ್ರಮುಖರಾದ ಗುರುನಾಥ ಕೊಳ್ಳೂರ, ಬಾಬು ವಾಲಿ, ಬಿ.ಜಿ. ಶೆಟಕಾರ, ಬಸವರಾಜ ಧನ್ನೂರು, ಶೈಲೇಂದ್ರ  ಲ್ದಾಳೆ, ಅನಿಲ ಬೆಲ್ದಾರ, ಸುರೇಶ ಚನ್ನಶೆಟ್ಟಿ, ಶರಣಪ್ಪ ಮಿಠಾರೆ, ಸೋಮಶೇಖರ ಪಾಟೀಲ ಗಾದಗಿ, ಕುಶಾಲರಾವ ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next