Advertisement

ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳ ಪರಿಶೀಲನೆ

06:49 PM Jun 25, 2020 | Naveen |

ಬೀದರ: ಕೋವಿಡ್‌-19 ಕೇರ್‌ ಸೆಂಟರ್‌ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್‌ ಹಾಲ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

Advertisement

ಯಾವುದೇ ಲಕ್ಷಣಗಳು ಇರದೇ ಇರುವ ಕೋವಿಡ್‌-19 ರೋಗಿಗಳಿಗೆ ಇರಲು ಅಂದಾಜು 400 ಹಾಸಿಗೆಗಳ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಅವರಿಗೆ ಸೂಚಿಸಿದರು. ಇದೇ ವೇಳೆ ಕನ್ವೆನ್ಷನ್‌ ಹಾಲ್‌ ಮಾಲೀಕರಿಗೆ ಎರಡ್ಮೂರು ದಿನಗಳೊಳಗೆ ಅಗತ್ಯ ತಯಾರಿ ಮಾಡಿಡುವಂತೆ ಡಿಸಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ತಹಶೀಲ್ದಾರ್‌ ಕೀರ್ತಿ ಚಾಲಕ ಇದ್ದರು.

ನಿಯಮ ಉಲ್ಲಂಘಿಸಿದ್ರೆ ಕ್ರಮ: ಕೋವಿಡ್  ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಹಾಗೂ ಸೇವಾ ಸಿಂಧು ಆ್ಯಪ್‌ ಮೂಲಕ ನೋಂದಣಿ ಮಾಡಿಸಿ ಅನುಮತಿ ಪಡೆದು ಜಿಲ್ಲೆಗೆ ಬಂದಿರುವ ಸಾರ್ವಜನಿಕರಿಗೆ ಹೋಮ್‌ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಆದರೆ ಕೆಲವರು ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ಓಡಾಡುತ್ತಿರುವುದು ಕಂಡುಬರುತ್ತಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಎಪಿಡೆಮಿಕ್‌ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣೆ ಕಾಯ್ದೆ 2005ರ ಅನ್ವಯ ದೂರು ದಾಖಲಿಸಿ ಮೊಕದ್ದಮೆ ಹೂಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next