Advertisement
ಇದು ಜಿಲ್ಲೆಯ ವಿವಿಧೆಡೆ ಮಂಗಳವಾರ ಎಳ್ಳಮಾವಾಸ್ಯೆ ಹಿನ್ನೆಲೆ ಕಂಡು ಬಂದ ದೃಶ್ಯ. ಹೆಮ್ಮಾರಿ ಕೊರೊನಾ ಮತ್ತು ಪ್ರಕೃತಿ ವಿಕೋಪದ ಹೊಡೆತದಿಂದ ಅನ್ನದಾತರು ಆರ್ಥಿಕವಾಗಿ ತತ್ತರಿಸಿದ್ದರು. ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಜಾತಿ, ಮತ ಎಂಬ ಭೇದ-ಭಾವ ಎನ್ನದೇ ಎಲ್ಲೆಡೆ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿತ್ತು..
ಜೀವಂತವಾಗಿಡುತ್ತಿದೆ. ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ಬೆಳಗ್ಗೆ ಬುಟ್ಟಿಯಲ್ಲಿ ತುಂಬಿಕೊಂಡು ರೈತರು ಹೊಲಗಳಿಗೆ ಬಂದು, ಅಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸುವ ಗುಡಿಸಿಲು ಮತ್ತು ಪಾಂಡವರಿಗೆ ಪೂಜೆ ಸಲ್ಲಿಸಿದರು. ನಂತರ ಜೋಳದ ಹೊಲದಲ್ಲಿ ಸಮೃದ್ಧವಾಗಿ ಬೆಳೆದ ಪೈರುಗಳ ಮಧ್ಯೆ ನಿಂತು ಚರಗಾ ಚೆಲ್ಲುವ ಮೂಲಕ “ಭೂತಾಯಿಗೆ ನಮಿಸುತ್ತ ಒಳ್ಳೆಯ ಬೆಳೆ ಕೊಡಮ್ಮಾ’ ಎಂದು ಕಾಯಕ ಜೀವಿಗಳು ಪ್ರಾರ್ಥಿಸಿದರು.
Related Articles
ತರಕಾರಿಗಳಿಂದ ತಯಾರಿಸಿದ ಭಜ್ಜಿ ವಿಶೇಷ. ಜತೆಗೆ ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಬಗೆ ಬಗೆಯ ಅನ್ನ, ಅಂಬಲಿ ಮತ್ತು ಹುಗ್ಗಿ ಸೇರಿದಂತೆ ವಿವಿಧ ಭಕ್ಷ್ಯ ಅಲ್ಲಿರುತ್ತೆ. ಬಂಧು-ಬಾಂಧವರು ಹಸಿರು ಪರಿಸರದ ಮಧ್ಯ ಊಟದ ಸವಿಯನ್ನು ಸವಿದರು. ಜಿಲ್ಲೆಯ ಕೆಲವೆಡೆ ಬುಧವಾರ ಸಹ ಹಬ್ಬವನ್ನು ಅಚರಿಸಲಾಗುತ್ತಿದ್ದು, ರೈತರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
Advertisement
ಉದ್ಯಾನದಲ್ಲಿ ಕಿಕ್ಕಿರಿದು ಸೇರಿದ್ದ ಜನ ಇಂದಿನ ಯಾಂತ್ರಿಕಮಯ ಜೀವನದಲ್ಲಿ ಒತ್ತಡಗಳ ಮಧ್ಯೆ ಕಾಲ ಕಳೆಯುವ ನಗರ ವಾಸಿಗರು ಎಳ್ಳ ಅಮಾವಾಸ್ಯೆ ಹಬ್ಬದಂದು ತಮ್ಮ ತಮ್ಮ ಊರುಗಳಿಗೆ ಅಥವಾ ಸಂಬಂಕರ ಜಮೀನುಗಳಿಗೆ ತೆರಳುತ್ತಾರೆ. ಇನ್ನೂ ಕೆಲವರು ನಗರದ ಪ್ರಸಿದ್ಧ ದೇವಸ್ಥಾನ ಮತ್ತು ಉದ್ಯಾನವನ, ವಿಹಾರಧಾಮಕ್ಕೆ ಹೋಗಿ ಊಟ ಮಾಡಿ ಹಬ್ಬವನ್ನು ಆಚರಿಸಿದರು. ಇಂತಹ ಹಬ್ಬಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.