Advertisement

ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೆ ಒತ್ತು ಕೊಡಿ

04:19 PM Dec 22, 2019 | Naveen |

ಬೀದರ: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನ್ವಯ ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಕಾನ್ಫರೆನ್ಸ್‌ ಹಾಲ್‌ನಲ್ಲಿ ಶನಿವಾರ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳಲ್ಲಿ ಮೀಸಲಿರುವ ಅಲ್ಪಸಂಖ್ಯಾತರ ಕಾರ್ಯಕ್ರಮಗಳು ಜನರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆಗೆ ಅನುಗುಣ ಯೋಜನಾವಾರು ಗುರಿ ನಿಗದಿಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕಳೆದ ಸಾಲಿನಲ್ಲಿ ಪಾವತಿಸಬೇಕಾದ ವಿದ್ಯಾರ್ಥಿವೇತನವನ್ನು ಕೂಡಲೇ ಪಾವತಿಸಬೇಕು. ಮತ್ತು ಪ್ರಸಕ್ತ ಸಾಲಿನ ವಿದ್ಯಾರ್ಥಿವೇತವನ್ನು ಶೀಘ್ರ ಪಾವತಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಇರುವ ಸ್ವಯಂ ಉದ್ಯೋಗ ಯೋಜನೆ, ಶ್ರಮ ಶಕ್ತಿ ಸಾಲದ ಯೋಜನೆ, ಅರಿವು ಸಾಲದ ಯೋಜನೆ, ಮೈಕ್ರೋ ಲೋನ್‌ ಸಾಲದ ಯೋಜನೆ, ಗಂಗಾ ಕಲ್ಯಾಣ, ಪಶು ಸಂಗೋಪನೆ ಯೋಜನೆ, ಪ್ರವಾಸಿ ಲೋನ್‌ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಶಾಸಕರಿಂದ ಕೂಡಲೇ ಆಯ್ಕೆಪಟ್ಟಿ ಪಡೆದು ಪ್ರಗತಿ ಸಾಧಿಸುವಂತೆ ಸೂಚಿಸಿದರು.

Advertisement

ನಿಗದಿತ ಗುರಿಯಂತೆ ಅಲ್ಪಸಂಖ್ಯಾತರಿಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ನೀಡುವಂತೆ ನೋಡಿಕೊಳ್ಳಬೇಕು ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಹೇಳಿದರು. ಜಿಲ್ಲೆಯಲ್ಲಿ 1043 ಅಂಗವಿಕಲ ವಿದ್ಯಾರ್ಥಿಗಳಿಗೆ ಮಾಸಾಶನ ಸೌಲಭ್ಯ ದೊರೆಯುತ್ತಿಲ್ಲ ಎಂದು ತಿಳಿದು ಬಂದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇಂತಹ ಮಕ್ಕಳ ಪಟ್ಟಿ ಪಡೆದು ಈ ಮಕ್ಕಳಿಗೆ ಸರ್ಕಾರದ ಮಾಸಾಶನ ಸೌಲಭ್ಯ ಕಲ್ಪಿಸಬೇಕು ಎಂದು ಸಾಮಾಜಿಕ ಭದ್ರತಾ ಯೋಜನೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ನಗರಾಭಿವೃದ್ಧಿ ಕೋಶ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅವಿನಾಶ ಎಂ.ಎ., ಶಿಕ್ಷಣ ಅಧಿಕಾರಿ ಶಿವಕುಮಾರಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next