Advertisement

4,176 ಮಂದಿ ವರದಿ ಬಾಕಿ

07:03 PM Jun 10, 2020 | Team Udayavani |

ಬೀದರ: ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 4,176 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಈವರೆಗೆ 29,899 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 25,501 ಮಂದಿಯದ್ದು ನೆಗೆಟಿವ್‌ ಬಂದಿದೆ.

Advertisement

ಸೋಂಕಿತರ ಪ್ರಥಮ ಸಂಪರ್ಕಿತ 2,096 ಮತ್ತು ದ್ವಿತೀಯ ಸಂಪರ್ಕಿತ 4,100 ಜನರನ್ನು ಗುರುತಿಸಲಾಗಿದೆ. ಕೋವಿಡ್ ಶಂಕಿತ 151 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ 36 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next