Advertisement

ಬಿಡಾಡಿ ದನಗಳ ಹಾವಳಿ; ವಾಹನ ಸವಾರರ ಪರದಾಟ

03:30 PM Dec 11, 2021 | Team Udayavani |

ಕಾರಟಗಿ: ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬಿಡಾಡಿ ದನಗಳ ಹಾವಳಿಮಿತಿಮೀರಿದ್ದು, ಎಲ್ಲೆಂದರಲ್ಲಿ ಗುಂಪುಗುಂಪಾಗಿ ಕಂಡುಬರುತ್ತಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅದರಲ್ಲೂ ದ್ವಿಚಕ್ರವಾಹನ ಸವಾರರ ಗೋಳು ಹೇಳತೀರದಾಗಿದೆ.

Advertisement

ತಾಲೂಕು ಕೇಂದ್ರವಾದ ಪಟ್ಟಣಕ್ಕೆ ವ್ಯಾಪಾರ-ವಹಿವಾಟಿಗಾಗಿ ನಿತ್ಯ ನೂರಾರು ಜನರು ಬರುತ್ತಾರೆ. ರಾಜ್ಯ ಹೆದ್ದಾರಿಯೂ ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳುಸಂಭವಿಸಿ ಹಲವಾರು ದ್ವಿಚಕ್ರವಾಹನ ಸವಾರರುಗಾಯಗೊಂಡಿದ್ದಾರೆ. ಈ ಕುರಿತುಎಚ್ಚರ ವಹಿಸಬೇಕಾದ ಪೊಲೀಸ್‌ ಇಲಾಖೆ ಮತ್ತು ಪುರಸಭೆ ನಿದ್ರೆಗೆ ಜಾರಿದ್ದು, ಬಿಡಾಡಿ ದನಗಳನ್ನು ನಿಯಂತ್ರಿಸುವವರು ಯಾರು ಎಂಬುದು ಸಾರ್ವಜನಿಕರ ಅಹವಾಲಾಗಿದೆ.

ಅಲ್ಲದೆ ಬೀದಿ ಬದಿಯ ಹೂವು-ಹಣ್ಣು ಸೇರಿದಂತೆ ಇತರೆದಿನಸಿ ವ್ಯಾಪಾರಿಗಳು ಕೂಡ ಬಿಡಾಡಿದನಗಳ ಹಾವಳಿಗೆ ತೀವ್ರ ಬೇಸತ್ತು ಹೋಗಿದ್ದಾರೆ.ವ್ಯಾಪಾರ ನಡೆಸುವುದೇ ದುಸ್ತರವಾಗಿದೆ. ಸ್ವಲ್ಪಯಾಮಾರಿದರೂ ತರಕಾರಿಗಳಿಗೆ ಬಾಯಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತವೆ. ನಿತ್ಯವೂ ತೊಂದರೆಅನುಭವಿಸುವಂತಾಗಿದೆ ಎಂಬುದು ತರಕಾರಿವ್ಯಾಪಾರಸ್ಥರ ಗೋಳಾಗಿದೆ. ಪೊಲೀಸ್‌ ಇಲಾಖೆಹಾಗೂ ಪುರಸಭೆ ಆಡಳಿತ ಈಗಲಾದರೂಎಚ್ಚೆತ್ತುಕೊಂಡು ಬಿಡಾಡಿ ದನಗಳ ಮಾಲೀಕರಿಗೆನೋಟಿಸ್‌ ಜಾರಿ ಮಾಡಿ ದನಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next