ತೆಕ್ಕಟ್ಟೆ: ಕೋವಿಡ್ ಆತಂಕದ ನಡುವೆಯೇ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ಜೂ.25 ರಂದು ಆರಂಭವಾಗಿದ್ದು, ಕುಂದಾಪುರ ತಾಲೂಕಿನ ಗ್ರಾಮೀಣ ಭಾಗದ ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನವೇ ಸುಮಾರು ಎಸೆಸೆಲ್ಸಿ ಪರೀಕ್ಷೆಗೆ ಹಾಜರಾದರು.
266 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು : ಪರಿಸರದ ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ,ಆರ್ಡಿ , ಅಮಾಸೆಬೈಲು ಸರಕಾರಿ ಪ್ರೌಢಶಾಲೆ ಹಾಗೂ ಗುಡ್ಡೆಯಂಗಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಸುಮಾರು 269 ವಿದ್ಯಾರ್ಥಿಗಳ ಪೈಕಿ , ಇಬ್ಬರು ವಿದ್ಯಾರ್ಥಿಗಳು ಬೇರೆ ಜಿಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದರೆ ಓರ್ವ ವಿದ್ಯಾರ್ಥಿ ಹೊರ ಜಿಲ್ಲೆಯಿಂದ ಬಂದು ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದು , ಅಮಾಸೆಬೈಲು ಹಾಗೂ ಆರ್ಡಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಂ.ಕರುಣಾಕರ ಶೆಟ್ಟಿ ಉದಯವಾಣಿಗೆ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದು, ಸ್ಯಾನಿಟೈಸೇಶನ್, ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿದ್ದು , ಬಿದ್ಕಲ್‌ಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ರಾಘವೇಂದ್ರ ಹೆಬ್ಟಾರ್ ಮಾರ್ಗದರ್ಶನದಲ್ಲಿ ಪ್ರತಿ ವಿದ್ಯಾರ್ಥಿಗಳಿಗೂ ಕೂಡಾ ಸ್ಕ್ರೀನಿಂಗ್ ತಪಾಸಣೆ ಹಾಗೂ ತುರ್ತು ವೈದ್ಯಕೀಯ ನೆರವಿಗಾಗಿ ಆರೋಗ್ಯ ಸಹಾಯಕರು ಶ್ರಮಿಸುತ್ತಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳು ಶಿಸ್ತು ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ .