Advertisement
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆ ಅಗತ್ಯ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ಈ ಮೊದಲು ಮೇ 1ರಂದು ಗ್ಯಾಸ್ ಕಂಪನಿಗಳು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಮುಂಬಯಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 809 ರೂಪಾಯಿ ಇದ್ದಿದ್ದು, ಈಗ 834.50 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 812 ರೂಪಾಯಿ ಇದ್ದಿದ್ದು, ಈಗ 836.50 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತಾದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 835.50 ರೂ. ಇದ್ದಿದ್ದು, ಈಗ 861 ರೂಪಾಯಿಗೆ ಏರಿಕೆಯಾಗಿದೆ.