Advertisement

ದೊಡ್ಡಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ : ಮುಖ್ಯಮಂತ್ರಿ ಬೊಮ್ಮಾಯಿ

11:44 PM Jul 16, 2022 | Team Udayavani |

ಬೆಂಗಳೂರು: ತಮ್ಮ ನೇತೃತ್ವದ ರಾಜ್ಯ ಸರಕಾರ ಜುಲೈ 28ಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಸಾಧನೆಯನ್ನು ಪ್ರಚುರಪಡಿಸಲು ದೊಡ್ಡಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಶುಕ್ರವಾರ ಇಡೀ ದಿನ ಪ್ರಮುಖರ ಜತೆ ಚಿಂತನಾ ಸಭೆ ನಡೆದಿದೆ. ಮುಂದಿನ ದಿನಗಳಲ್ಲಿ ಸರಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ ಹೋಗ ಬೇಕು ಹಾಗೂ ಸರಕಾರದ ಯೋಜನೆಯನ್ನು ಜನರಿಗೆ ತಲುಪಿಸುವ ಬಗ್ಗೆಯೂ ಚರ್ಚೆ ಆಗಿದೆ.

ಪ್ರವಾಹ ಪೀಡಿತ ಜಿಲ್ಲೆಗಳ ಡಿ.ಸಿ.ಗಳ ಜತೆ ಮಾತಾಡಿದ್ದೇನೆ. ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿ ದ್ದೇನೆ. ನದಿ ಪಾತ್ರದ ಪಕ್ಕದಲ್ಲಿ ಇರುವವರ ರಕ್ಷಣೆಗೆ ಮುಂಜಾಗ್ರತ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next