Advertisement

ಮಹಾರಾಷ್ಟ್ರ ಅಂಕಿಅಂಶ ಪರಿಷ್ಕರಣೆ: 24ಗಂಟೆಯಲ್ಲಿ 42 ಸಾವಿರ ಕೋವಿಡ್ ಪ್ರಕರಣ, 3,998 ಸಾವು!

10:41 AM Jul 21, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,015 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿರುವುದಾಗಿ ಬುಧವಾರ (ಜುಲೈ 21) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೊನೆಯ ಹಂತದ ಪ್ರಯತ್ನ?: ಏಕಾಂಗಿಯಾಗಿ ದೆಹಲಿಗೆ ಹೊರಟ ರೇಣುಕಾಚಾರ್ಯ!

ಕಳೆದ 24ಗಂಟೆಗಳಲ್ಲಿ 3,998 ಮಂದಿ ಸಾವನ್ನಪ್ಪಿದ್ದು, ದೇಶದ ಕೋವಿಡ್ 19 ಪ್ರಕರಣಗಳ ಸಂಖ್ಯೆ 3.12 ಕೋಟಿಗೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹಾಗೂ ಸಾವಿನ ಸಂಖ್ಯೆಯನ್ನು ಪರಿಷ್ಕರಿಸಿ ಪ್ರಕಟಿಸಿದ ಬಳಿಕ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರದಲ್ಲಿ ಅಂಕಿಅಂಶದ ಪರಿಷ್ಕರಣೆ ನಂತರ ಕೋವಿಡ್ ನಿಂದ 3,509 ಮಂದಿ ಸಾವನ್ನಪ್ಪಿರುವುದಾಗಿ ಪ್ರಕಟಿಸುವ ಮೂಲಕ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದರೊಂದಿಗೆ ದೇಶದಲ್ಲಿ 489 ಕೋವಿಡ್ ಸಾವು ಪ್ರಕರಣ ವರದಿಯಾಗಿದ್ದು, ಜತೆಗೆ ಮಹಾರಾಷ್ಟ್ರದ ಸಾವಿನ ಪ್ರಮಾಣ ಒಟ್ಟು ಸೇರಿ 3,988ಕ್ಕೆ ಹೆಚ್ಚಳವಾಗಿದೆ ಎಂದು ವರದಿ ವಿವರಿಸಿದೆ.

ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,18ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4.07ಲಕ್ಷಕ್ಕೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next