Advertisement

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

11:35 PM Jun 03, 2024 | |

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಕೇವಲ ಸಚಿವರು ಮಾತ್ರವಲ್ಲ, ದೊಡ್ಡ ದೊಡ್ಡವರ ಹೆಸರು ಕೇಳಿ ಬಂದಿದೆ. ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಹೈಕಮಾಂಡ್‌ಗಾಗಿ ತೆಲಂಗಾಣಕ್ಕೆ ವರ್ಗಾಯಿಸಿದ್ದು ಇದೇ ಹಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

Advertisement

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಈ ಹಗರಣದ ವ್ಯಾಪ್ತಿ ಬಹಳ ದೊಡ್ಡದಿದೆ. ಪ್ರಕರಣ ಸಂಬಂಧ ಸಚಿವ ನಾಗೇಂದ್ರ ತತ್‌ಕ್ಷಣ ರಾಜೀನಾಮೆ ಕೊಡಬೇಕು. ಇದರಲ್ಲಿ ದೊಡ್ಡವರ ಹೆಸರು ಸಹ ಕೇಳಿ ಬರುತ್ತಿರುವುದರಿಂದ ಸಿಬಿಐ ತನಿಖೆ ನಡೆಸಬೇಕು. ಎಸ್‌ಐಟಿ ತನಿಖೆಯಿಂದ ಸತ್ಯ ಬಹಿರಂಗಗೊಳ್ಳುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸದ್ಯದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next