Advertisement

Relief to DK Shivakumar: ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪವೇಶಕ್ಕೆ ಸುಪ್ರೀಂ ನಕಾರ

12:49 PM Jul 31, 2023 | Team Udayavani |

ಹೊಸದಿಲ್ಲಿ: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Advertisement

ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.

ಇದನ್ನೂ ಓದಿ:ಜ್ಞಾನವಾಪಿ ಮಸೀದಿಯಾಗಿದ್ದರೆ ಒಳಗೆ ತ್ರಿಶೂಲ ಹೇಗೆ ಬಂತು…? ಯೋಗಿ ಆದಿತ್ಯನಾಥ್ ಪ್ರಶ್ನೆ

ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿತ್ತು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯ ನಂತರ, ಸಿಬಿಐ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು.

2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು.

Advertisement

2020ರಲ್ಲೇ ಪ್ರಕರಣ ನಡೆದಿದ್ದರೂ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಸಿಬಿಐ ತನ್ನ ಮೇಲೆ ಪದೇ ಪದೇ ನೋಟಿಸ್‌ ಜಾರಿ ಮಾಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಶಿವಕುಮಾರ್‌ ಅವರು ತಮ್ಮ ವಿರುದ್ಧದ ಮಂಜೂರಾತಿ ಮತ್ತು ವಿಚಾರಣೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಆರಂಭದಲ್ಲಿ ಅವರ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ಪೀಠವು ವಜಾಗೊಳಿಸಿತ್ತು. ಬಳಿಕ ಡಿಕೆಶಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಬಳಿಕ ಜುಲೈ 17ರಂದು ಮೂರು ವಾರಗಳ ಕಾಲ ವಿಸ್ತರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next