ನವದೆಹಲಿ: ಕಾಂಗ್ರೆಸ್ ನಲ್ಲಿ ರಾಜಕೀಯ ಪರ್ವ ಮುಂದುವರಿದಿದ್ದು, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಪಕ್ಷದ ಎಲ್ಲಾ ಹುದ್ದೆಗಳಿಗೆ ಶುಕ್ರವಾರ (ಆಗಸ್ಟ್ 26) ರಾಜೀನಾಮೆ ಘೋಷಿಸಿದ್ದು, ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಭಾರೀ ಹಿನ್ನಡೆ ಅನುಭವಿಸಿದೆ.
ಇದನ್ನೂ ಓದಿ:ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ 6ಮಂದಿ ಬೆಳಗಾಗುತ್ತಲೇ ಶವವಾಗಿ ಪತ್ತೆ: ಕಾರಣ ನಿಗೂಢ
ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಗೆ ಸಲ್ಲಿಸಿರುವ 4 ಪುಟಗಳ ರಾಜೀನಾಮೆ ಪತ್ರದಲ್ಲಿ, ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ. ರಾಹುಲ್ ಗಾಂಧಿ ಅಪ್ರಬುದ್ಧರಾಗಿದ್ದು, ಅವರು ಪಕ್ಷದ ಸಮಾಲೋಚನಾ ಕಾರ್ಯವಿಧಾನವನ್ನೇ ನಾಶ ಮಾಡುತ್ತಿದ್ದಾರೆ ಎಂದು ಗುಲಾಂ ನಬಿ ಕಿಡಿಕಾರಿರುವುದಾಗಿ ವರದಿ ವಿವರಿಸಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೆ ಆಜಾದ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಗುಲಾಂ ನಬಿ ಆಜಾದ್ ಜಮ್ಮು-ಕಾಶ್ಮೀರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್ ಪಕ್ಷದ ಮೇಲಿನ ಅಸಮಾಧಾನದಿಂದ ಗುಲಾಂ ನಬಿ ಆಜಾದ್ ಅವರು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ಹೇಳಿತ್ತು.