ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಡಿ.3) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 24, ಬಿಜೆಪಿ 22 ಸ್ಥಾನಗಳಲ್ಲಿ ಮುನ್ನಡೆ ಕಂಡಿದ್ದು, ಛತ್ತೀಸ್ ಗಡದಲ್ಲಿ ಕಾಂಗ್ರೆಸ್ 15, ಬಿಜೆಪಿ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 20, ಬಿಜೆಪಿ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ:Development: ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕತ್ತರಿಸುವುದು ಸರಿಯೇ ?
2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾದ ಈ ರಾಜ್ಯಗಳ ಫಲಿತಾಂಶ ದೇಶಾದ್ಯಂತ ಕುತೂಹಲ ಮೂಡಿಸಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಮಿಜೋರಾಂನಲ್ಲಿ ಸೋಮವಾರ ಮತ ಎಣಿಕೆ ನಡೆಯಲಿದೆ.
ರಾಜಸ್ಥಾನದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆ ಇದ್ದು, ತೆಲಂಗಾಣದಲ್ಲಿ ಫೋಟೋ ಫಿನಿಶ್ ಫಲಿತಾಂಶ ಬರಬಹುದು. ಹಾಗೂ ಮಧ್ಯಪ್ರದೇಶದಲ್ಲೂ ಸ್ಪಷ್ಟ ಬಹುಮತ ಯಾರಿಗೆ ದಕ್ಕಬಹುದೆಂದು ಹೇಳಲಾಗದು ಎಂದು ಇತ್ತೀಚೆಗೆ ಪ್ರಕಟವಾದ ಮತಗಟ್ಟೆ ಸಮೀಕ್ಷೆಗಳು ಹೇಳಿವೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಇದ್ದು, ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದರೆ ಪ್ರತಿಪಕ್ಷಗಳು ತಮ್ಮ ಶಾಸಕರನ್ನು ಖರೀದಿಸಿ, ಸರ್ಕಾರ ರಚನೆಗೆ ಮುಂದಾಗಬಹುದು ಎಂಬ ಆತಂಕ ಕಾಂಗ್ರೆಸ್ ನಲ್ಲಿದೆ.