ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮತ ಎಣಿಕೆ ಕಾರ್ಯ ಆಯಾ ರಾಜ್ಯಗಳಲ್ಲಿ ಬೆಳಿಗ್ಗೆ 8ಕ್ಕೆ ಆರಂಭವಾಗಿದೆ.
ಸೆಪ್ಟೆಂಬರ್ 5 ರಂದು ನಡೆದ ಉಪಚುನಾವಣೆಯ ಆರು ರಾಜ್ಯಗಳ ಏಳು ಅಸೆಂಬ್ಲಿ ಸ್ಥಾನಗಳ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು ಎನ್ ಡಿಎ ಹಾಗೂ ಇಂಡಿಯಾ ಕದನ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಈಗಾಗಲೇ ಉತ್ತರಾಖಂಡದ ಬಾಗೇಶ್ವರ್, ಉತ್ತರ ಪ್ರದೇಶದ ಘೋಸಿ, ಕೇರಳದ ಪುತ್ತುಪಲ್ಲಿ, ಪಶ್ಚಿಮ ಬಂಗಾಳದ ಧೂಪಗುರಿ, ಜಾರ್ಖಂಡ್‌ನ ಡುಮ್ರಿ ಮತ್ತು ತ್ರಿಪುರಾದ ಬೊಕ್ಸಾನಗರ ಮತ್ತು ಧನ್‌ಪುರ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಬೆಳಿಗ್ಗೆ ಎಂಟು ಗಂಟೆಗೆ ಆರಂಭವಾಗಿದೆ.
ಏಳು ಸ್ಥಾನಗಳ ಪೈಕಿ ಧನಪುರ್, ಬಾಗೇಶ್ವರ್ ಮತ್ತು ಧೂಪಗುರಿ ಬಿಜೆಪಿ ಪಾಲಾಗಿದೆ. ಯುಪಿ ಮತ್ತು ಜಾರ್ಖಂಡ್‌ನಲ್ಲಿ ಕ್ರಮವಾಗಿ ಸಮಾಜವಾದಿ ಪಕ್ಷ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ಸ್ಥಾನಗಳನ್ನು ಪಡೆದಿವೆ. ತ್ರಿಪುರಾದ ಬೊಕ್ಸಾನಗರ್ ಕ್ಷೇತ್ರ ಮತ್ತು ಕೇರಳದ ಪುತ್ತುಪಲ್ಲಿ ಕ್ರಮವಾಗಿ ಸಿಪಿಎಂ ಮತ್ತು ಕಾಂಗ್ರೆಸ್ ಜೊತೆಗಿದ್ದವು. ಹಾಲಿ ಶಾಸಕ ಮತ್ತು ಒಬಿಸಿ ನಾಯಕ ದಾರಾ ಸಿಂಗ್ ಚೌಹಾಣ್ ಬಿಜೆಪಿಗೆ ಮರು ಸೇರ್ಪಡೆಗೊಂಡ ನಂತರ ಘೋಸಿ ಸ್ಥಾನ ತೆರವಾಗಿತ್ತು. ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು ಈಗ ಘೋಸಿ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ.
ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಗೆ ಪೈಪೋಟಿ ನೀಡುವ ಉದ್ದೇಶದಿಂದ ರಚಿತಗೊಂಡಿರುವ ಇಂಡಿಯಾ ಮೈತ್ರಿಕೂಟಕ್ಕೆ ಇದೊಂದು ಅಗ್ನಿ ಪರೀಕ್ಷೆಯಾಗಿದೆ
ಇದನ್ನೂ ಓದಿ: Bangaloreಗೆ ಪ್ರತ್ಯೇಕ ಆರೋಗ್ಯ ವಿಭಾಗ; ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಡೆಂಘೀ ಪ್ರಕರಣ