Advertisement

ಶಾಂತಿ, ಭದ್ರತೆಗೆ ದೊಡ್ಡ ಅಪಾಯ: ಎಚ್‌.ಡಿ. ಕುಮಾರಸ್ವಾಮಿ

10:25 PM Feb 22, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್‌, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂ ಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ರಾಜ್ಯ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸಕರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಪೋಲೋ, ವೆಂಟೋ ಕಾರುಗಳ ತಯಾರಿಕೆ ಸ್ಥಗಿತ?

ಸರಕಾರ ವಜಾ ಆಗುವ ಸ್ಥಿತಿ
ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. .

ಹಿಜಾಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರಕಾರದ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಳಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ.
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

Advertisement
Advertisement

Udayavani is now on Telegram. Click here to join our channel and stay updated with the latest news.

Next