Advertisement
ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠದ ಮುಂದೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ಈ ನಿಟ್ಟಿನಲ್ಲಿ ಸಲ್ಲಿಸಿದ್ದಾರೆ.
Related Articles
Advertisement
ಯುಪಿಎಸ್ಸಿ ಪರೀಕ್ಷೆಯನ್ನು ಭೇದಿಸುವ ಕೊನೆಯ ಪ್ರಯತ್ನದಲ್ಲಿ ಹಾಜರಾಗಲು ಸಾಧ್ಯವಾಗದ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದ್ದರು.
ಇದನ್ನೂ ಓದಿ : ಸರ್ಚಿಂಗ್ ನಿಷ್ಕ್ರಿಯಗೊಳಿಸ್ತೇವೆ: ಆಸ್ಟ್ರೇಲಿಯಾ ಸರ್ಕಾರ v\s ಗೂಗಲ್ ಜಟಾಪಟಿ!
ಕೋವಿಡ್ 19 ಸಾಂಕ್ರಾಮಿಕ ಮತ್ತು ದೇಶದ ಹಲವಾರು ಭಾಗಗಳಲ್ಲಿ ನೆರೆ ಮತ್ತು ಪ್ರವಾಹದಿಂದಾಗಿ ಅಕ್ಟೋಬರ್ 4 ರಂದು ನಡೆದ ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯನ್ನು ಮುಂದೂಡಲು ಉನ್ನತ ನ್ಯಾಯಾಲಯ ಕಳೆದ ವರ್ಷ ಸೆಪ್ಟೆಂಬರ್ 30 ರಂದು ನಿರಾಕರಿಸಿತ್ತು.
ಆದಾಗ್ಯೂ, 2020 ರಲ್ಲಿ ತಮ್ಮ ಕೊನೆಯ ಪ್ರಯತ್ನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚುವರಿ ವಯೋಮಿತಿಯನ್ನು ವಿಸ್ತರಿಸುವುದರೊಂದಿಗೆ ಹೆಚ್ಚುವರಿ ಅವಕಾಶವನ್ನು ನೀಡುವುದನ್ನು ಪರಿಗಣಿಸಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಸಾರ್ವಜನಿಕ ಸೇವಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತ್ತು.
ಇದನ್ನೂ ಓದಿ : ಆಸ್ಟ್ರೇಲಿಯಾ ವಿರುದ್ಧದ ಟೀಂ ಇಂಡಿಯಾದ ಗೆಲುವು ಬದುಕಿಗೆ ದೊಡ್ಡ ಪಾಠ: ಮೋದಿ