Advertisement

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

01:23 PM Jun 19, 2024 | Team Udayavani |

ಬೆಂಗಳೂರು: ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Advertisement

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿರುವ ಅವರು, ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿಮ ಉಲ್ಲೇಖಿಸಿದ್ದಾರೆ.

ದೂರು ನೀಡಿರುವ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ ನಮ್ಮ ʼಕರ್ನಾಟಕದ ಆಳಿಯʼ ತಂಡದ ಆಫೀಸ್‌ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮೆಸೇಜ್‌ ಅಥವಾ ಸೋಶಿಯಲ್‌ ಮೀಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು. ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ ಕನ್ನಡಕ್ಕಾಗಿ, ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದರ್ಶನ್‌ ನನ್ನ ಮೇಲೆ ಹಲ್ಲೆ ನಡೆಸಿಲ್ಲ.. ನಾನು ಅವರ ದೊಡ್ಡ ಅಭಿಮಾನಿ: ಪವಿತ್ರಾ ಮಾಜಿ ಪತಿ  

Advertisement

ಪ್ರಥಮ್‌ ಅವರಿಗೆ ದರ್ಶನ್‌ ಅಭಿಮಾನಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ. ಪ್ರಥಮ್‌ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಮಾತನಾಡಿದ್ದರು. ಇದು ದರ್ಶನ್‌ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು.

ಇದೇ ಕಾರಣದಿಂದ ಕೆಲ ದರ್ಶನ್‌ ಅಭಿಮಾನಿಗಳ ಪ್ರಥಮ್‌ ಗೆ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next