Advertisement

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ

12:43 AM Nov 08, 2022 | Team Udayavani |

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

Advertisement

ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next