Advertisement

ಪರಿಹಾರ ಕೊಡದಿದ್ದರೆ ಬೃಹತ್‌ ಹೋರಾಟ: ಕಾಂಗ್ರೆಸ್‌ ಎಚ್ಚರಿಕೆ

04:09 PM Nov 23, 2021 | Shwetha M |

ಸಿಂಧನೂರು: ಮಳೆಯಿಂದಾಗಿ ತಾಲೂಕಿನಲ್ಲಿ ಭತ್ತದ ಬೆಳೆಹಾನಿಗೆ ಪರಿಹಾರ ಒದಗಿಸಲು ಆಗ್ರಹಿಸಿ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ಆದಿಶೇಷನ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ತಹಶೀಲ್‌ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಲಾಯಿತು.

Advertisement

ಈ ವೇಳೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ತಾಲೂಕಿನಲ್ಲಿ 1 ಲಕ್ಷ ಎಕರೆಗೂ ಮೇಲ್ಪಟ್ಟ ಪ್ರದೇಶದಲ್ಲಿ ಭತ್ತದ ಬೆಳೆಹಾನಿಯಾಗಿದೆ. ಜೋಳ, ಹತ್ತಿ, ತೊಗರಿ, ಕಡಲೆ ಬೆಳೆಗಳು ಶೇ.80ರಷ್ಟು ನಷ್ಟವಾಗಿವೆ. ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆಹಾನಿ ಪರಿಶೀಲನೆ ಮಾಡಲಾಗಿತ್ತು. ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಈಗಲೂ ಕೂಡ ಸರಕಾರ ಎಚ್ಚೆತ್ತುಕೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಆಂಧ್ರಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಭತ್ತ ಖರೀದಿಗೆ ಮಾರ್ಗಸೂಚಿಗಳನ್ನು ಹೊರಡಿಸಬೇಕು. ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಿಸಬೇಕು. ರೈತರ ಈ ಎಲ್ಲ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು. ಸರಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್‌ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಉಪಾಧ್ಯಕ್ಷ ಮುರ್ತುಜಾ ಹುಸೇನ್‌, ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ, ನಗರ ಕಾಂಗ್ರೆಸ್‌ ಅಧ್ಯಕ್ಷ ಖಾಜಿಮಲಿಕ್‌, ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌, ರೈತ ಮುಖಂಡರಾದ ದಶರಥರೆಡ್ಡಿ ಚನ್ನಳ್ಳಿ, ಜಾಫರ್‌ ಜಾಹಗೀರದಾರ್‌, ಅಮರೇಶಪ್ಪ ಮಾಡಸಿ ರವಾರ, ನಿರುಪಾದೆಪ್ಪ ಗುಡಿಹಾಳ, ಸಾಯಿ ರಾಮ ಕೃಷ್ಣ, ಸಂತೋಷ್‌ ಅಂಗಡಿ, ಪಗಡದಿನ್ನಿ ಶ್ರೀನಿವಾಸ್‌, ಬಸವರಾಜ ಮುರಾರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next