Advertisement

Bihar: ನಿರ್ಮಾಣ ಹಂತದ ಮತ್ತೊಂದು ಸೇತುವೆ ಕುಸಿತ

01:43 AM Aug 09, 2024 | Team Udayavani |

ಕಾತಿಹಾರ್‌:ಬಿಹಾರದಲ್ಲಿ ಸೇತುವೆಗಳ ಕುಸಿತದ ಸರಣಿ ಮುಂದುವರಿದಿದ್ದು, ಕಾತಿಹಾರ್‌ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಗುರುವಾರ ಕುಸಿದುಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇತ್ತೀಚೆಗಷ್ಟೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, 2 ಪಿಲ್ಲರ್‌ಗಳನ್ನು ಅಳವಡಿಸಲಾಗಿತ್ತು. ಗಂಗಾ ನದಿಯ ಹರಿವಿನ ತೀವ್ರತೆ ಹೆಚ್ಚಿರುವ ಕಾರಣ ಸೇತುವೆ ಕುಸಿದಿರಬಹುದು ಎಂದು ಶಂಕಿಸಲಾಗಿದೆ. ಕಳೆದ 2 ತಿಂಗಳಲ್ಲಿ 12 ಸೇತುವೆಗಳು ಕುಸಿದಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸರಕಾರ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next