ಬಿಹಾರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇಸರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದ ಬಳಿ ಮದುವೆಗೂ ಮುನ್ನ ನಡೆಯುವ ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ನೆರೆದಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದು ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಅಲ್ಲದೆ ಅನೇಕ ಮಂದಿ ಗಾಯಗೊಂಡಿದ್ದಾರೆ.
ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿದ್ದು ಇದರ ಭಾಗವಾಗಿ ಧಾರ್ಮಿಕ ಮೆರವಣಿಗೆ ನಡೆಸಲು ಸಿದ್ದರೆ ನಡೆಸಲಾಗುತ್ತಿತ್ತು ಅದರಂತೆ ರಾತ್ರಿ ಒಂಬತ್ತು ಗಂಟೆಯ ಸುಮಾರಿಗೆ ಊರಿನ ಜನ ರಸ್ತೆ ಬದಿ ಸೇರಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿದ್ದ ಜನರಿಗೆ ಢಿಕ್ಕಿ ಹೊಡೆದಿದೆ, ಪರಿಣಾಮ ಮಹಿಳೆಯರು ಮತ್ತು 6 ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅಪಘಾತದ ಕುರಿತು ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.