Advertisement
ಬಿಹಾರದ ಸಕ್ರಾ, ಮಹುವಾ, ಮಹಾ°ರ್ ಮತ್ತು ಕಂಟಿಗಳಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ವಿಪಕ್ಷ ನಾಯಕ ತೇಜಸ್ವಿ ಯಾದವ್ ಅವರ ಹೆಸರು ಪ್ರಸ್ತಾಪ ಮಾಡದೆ ಟೀಕಿಸಿದ ಮುಖ್ಯಮಂತ್ರಿ ಕೆಲವು ನಾಯಕರು ತಮ್ಮನ್ನು ಟೀಕಿಸಿ ಬರಿದೆ ಪ್ರಚಾರ ಪಡೆಯಲು ಮುಂದಾಗುತ್ತಿದ್ದಾರೆ. ಅದನ್ನು ಅವರು ಮುಂದುವರಿಸಲಿ. ತಮಗೆ ಅಂಥ ಪ್ರಚಾರ ಅಗತ್ಯವಿಲ್ಲ ಎಂದರು.
Related Articles
Advertisement
2 ಕಡೆ ಇಂದು ರಾಹುಲ್ ಪ್ರಚಾರ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅ.28ರಂದು ವಾಲ್ಮೀಕಿನಗರ ಮತ್ತು ಕುಶೇಶ್ವರ್ ಆಸ್ಥಾನ್ ಎಂಬಲ್ಲಿ ಪ್ರಚಾರ ನಡೆಸಲಿದ್ದಾರೆ. ವಾಲ್ಮೀಕಿನಗರ ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.7, ವಿಧಾನಸಭೆ ಚುನಾವಣೆ ನ.3ರಂದು ನಡೆಯಲಿದೆ.
ಹೈಕೋರ್ಟ್ ಆದೇಶಕ್ಕೆ ತಡೆ: ನ.3ರಂದು ಮಧ್ಯಪ್ರದೇಶ ದಲ್ಲಿ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ವರ್ಚುವಲ್ ಪ್ರಚಾರ ನಡೆಸಬೇಕು ಎಂಬ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಚುನಾವಣ ಆಯೋಗಕ್ಕೆ ಸೂಚನೆ ನೀಡಿತು. ಅ.20 ಮತ್ತು 23ರಂದು ಮಧ್ಯಪ್ರದೇಶ ನೀಡಿದ್ದ ಆದೇಶದಲ್ಲಿನ ಅಂಶಗಳನ್ನು ಪರಿಶೀಲಿಸುವಂತೆಯೂ ನ್ಯಾಯಪೀಠ ಆಯೋಗಕ್ಕೆ ಸೂಚಿಸಿದೆ.
ಪಾಲನೆಯಾಗದ ನಿಯಮ: ಕೊರೊನಾ ಸೋಂಕಿನ ನಡುವೆಯೇ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಹಲವು ನಿಯಮಗಳನ್ನು ಚುನಾವಣ ಆಯೋಗ ಸೂಚಿಸಿತ್ತು. ಎಲ್ಲಾ ಪಕ್ಷಗಳ ಪ್ರಚಾರ ಕಾರ್ಯಕ್ರಮದಲ್ಲಿ ಅವುಗಳ ಕನಿಷ್ಠ ಪಾಲನೆ ಕಂಡುಬರುತ್ತಿದೆ.
ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ, ಚುನಾವಣ ಉಸ್ತುವಾರಿ ದೇವೇಂದ್ರ ಫಡ್ನವಿಸ್, ಛಪ್ರಾ ಸಂಸದ ರಾಜೀವ್ ಪ್ರತಾಪ್ ರೂಡಿ ಸೇರಿದಂತೆ ಪ್ರಮುಖರಿಗೆ ಸೋಂಕು ದೃಢಪಟ್ಟು ಕ್ವಾರಂಟೈನ್‌ನಲ್ಲಿ ಇದ್ದಾರೆ.
ಈ ಅಂಶಗಳು ಯಾವ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆಯ ಸಂದೇಶವನ್ನೇ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ರ ಸೋಂಕು ತಡೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು. ಸೋಂಕು ತಡೆ ನಿಯಮ ಪಾಲನೆ ನಿಟ್ಟಿನಲ್ಲಿ ಅ.21ರಂದು ಬಿಹಾರ ರಾಜ್ಯ ಮುಖ್ಯ ಚುನಾವಣಧಿಕಾರಿಗೆ ಕೇಂದ್ರ ಚುನಾವಣ ಆಯೋಗ ನಿರ್ದೇಶನ ನೀಡಿತ್ತು.